ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ವಾರ್ಷಿಕ 294 ಕೋಟಿ ವ್ಯವಹಾರ, 73.15 ಲಕ್ಷ ರೂ. ಲಾಭ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು 2016-17ನೇ ಸಾಲಿನಲ್ಲಿ 294 ಕೋಟಿಯಷ್ಟು ವ್ಯವಹಾರ ನಡೆಸಿ 73.15 ಲಕ್ಷ ರೂ. ಲಾಭಗಳಿಸಿದ್ದು, ಸಂಸ್ಥೆಯ ಸದಸ್ಯರಿಗೆ ಶೇ.13ರಷ್ಟು ಡಿವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು.

ಅವರು ಸೋಮವಾರ ಬೈಂದೂರಿನ ಪ್ರಧಾನ ಕಛೇರಿಯಲ್ಲಿ ಜರುಗಿದ 15ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಆರ್ಥಿಕ ವರ್ಷದ ಅಂತ್ಯಕ್ಕೆ ಸಂಘವು 29.85 ಕೊಟಿ ರೂ. ಠೇವಣಿ ಸಂಗ್ರಹಿಸಿ, 25.23 ಕೋಟಿ ರೂ. ಸಾಲ ನೀಡಿ ಒಟ್ಟು 294 ಕೋಟಿ ರೂ. ವಹಿವಾಟು ನಡೆಸಿದೆ ಎಂದ ಅವರು ಪ್ರಧಾನ ಕಛೇರಿ ಸೇರಿದಂತೆ ಆರು ಶಾಖೆಗಳನ್ನು ಹೊಂದಿ ಉತ್ತಮ ವ್ಯವಹಾರ ನಡೆಸುತ್ತಿದ್ದು, ಕುಂದಾಪುರದಲ್ಲಿ ಸ್ವಂತ ಕಟ್ಟಡದಲ್ಲಿ ಕಛೇರಿ ತೆರೆಯುವ ಯೋಜನೆಯಿದೆ. ಪ್ರತಿವರ್ಷ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿದ್ದು ಈ ಭಾರಿ 1,71,000 ರೂ ವಿದ್ಯಾರ್ಥಿ ವೇತನ ನೀಡಲಾಗಿದೆ ಎಂದರು.

ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಿಸಲಾಯಿತು. ಆರ್ಥಿಕ ವರ್ಷದಲ್ಲಿ ಉತ್ತಮ ಪ್ರಗತಿ ತೋರಿದ ಸಂಘದ ಶಾಖಾ ಪ್ರಬಂಧಕರನ್ನು ಗುರುತಿಸಲಾಯಿತು. ಈ ಸಂದರ್ಭ ಸಂಸ್ಥೆಯ ನಿರ್ದೇಶಕರಾದ ಕೆ. ಶಂಕರ ಪೂಜಾರಿ, ಕೆ. ಶ್ರೀನಿವಾಸ ಪೂಜಾರಿ, ಚಿಕ್ಕು ಪೂಜಾರಿ, ಎನ್. ಅಣ್ಣಪ್ಪ ಬಿಲ್ಲವ, ಜಯಸೂರ್ಯ ಪೂಜಾರಿ, ಕಲ್ಪನಾ ಬಿ. ಪೂಜಾರಿ, ಪುಟ್ಟ ಎಂ. ಬಿಲ್ಲವ, ಶೇಖರ ಪೂಜಾರಿ, ಉದಯ ಜಿ. ಪೂಜಾರಿ ಉಪಸ್ಥಿತಿತರಿದ್ದರು.

ಸಂಘದ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಕುಷ್ಠ ಬಿಲ್ಲವ ವಾರ್ಷಿಕ ವರದಿ ವಾಚಿಸಿದರು. ನಿರ್ದೇಶಕ ಯು. ಕೇಶವ ಪೂಜಾರಿ ವಂದಿಸಿದರು.

Leave a Reply

Your email address will not be published. Required fields are marked *

12 + 4 =