ಕುಂದಾಪುರ: ಸಹಕಾರ ರತ್ನ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಸಕ್ತ ಸಾಲಿನಲ್ಲಿ ಎಸ್‌ಸಿಬಿಎ ಸಂಸ್ಥೆಯಿಂದ ಪ್ರತಿಷ್ಠಿತ ಬೆಸ್ಟ್ ಚೇರ್‌ಮೆನ್ ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಕುಂದಾಪುರ ತಾಲೂಕು ಸಹಕಾರಿ ಸಂಘಗಳ ಪರವಾಗಿ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಇಲ್ಲಿನ ಆರ್. ಎನ್. ಶೆಟ್ಟಿ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ವಹಿಸಿದ್ದರು. ಮಾಜಿ ಶಾಸಕ ಎ. ಜಿ. ಕೊಡ್ಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಿವೃತ್ತ ಉಪನ್ಯಾಸಕ ಎಸ್. ಜನಾರ್ಧನ ಮರವಂತೆ ಅಭಿನಂದನಾ ಭಾಷಣ ಮಾಡಿದರು. ಈ ಸಂದರ್ಭ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರುಗಳಾದ ಎಸ್. ರಾಜು ಪೂಜಾರಿ, ಬಿ. ರಘುರಾಮ ಶೆಟ್ಟಿ, ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಸ್. ದಿನಕರ ಶೆಟ್ಟಿ, ಕುಂದಾಪುರ ತಾಲೂಕು ಸಹಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಎಚ್. ರಾಜೀವ ಶೆಟ್ಟಿ, ತಾಲೂಕು ಕೃಷಿ ಉತ್ಪನ್ನ ಮಾರಾಟ ಸಹಕಾರಿ ಸಂಘದ ಅಧ್ಯಕ್ಷ ಮಲ್ಯಾಡಿ ಮೋಹನ್‌ದಾಸ್ ಶೆಟ್ಟಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್‌ಚಂದ್ರ ಶೆಟ್ಟಿ ಸೇರಿದಂತೆ ವಿವಿಧ ಸಹಕಾರಿ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

5 + eight =