ಕುಂದಾಪುರ: ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಡಾ. ಭಾಸ್ಕರ್ ಮಯ್ಯ ನಿಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಮೇ.6: ನಿವೃತ್ತ ಪ್ರಾಧ್ಯಾಪಕ, ಸಾಹಿತಿ ಸಾಲಿಗ್ರಾಮ ಗುಂಡ್ಮಿಯ ಡಾ. ಜಿ. ಭಾಸ್ಕರ್ ಮಯ್ಯ (70 ವ) ಹೃದಯಾಘಾತಕ್ಕೆ ಒಳಗಾಗಿ ಇಂದು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ ಕೋವಿಡ್ ಸೊಂಕು ಕಾಣಿಸಿಕೊಂಡಿತ್ತು ಎನ್ನಲಾಗಿದೆ. ಕಳೆದ ನಾಲ್ಕು ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Click here

Click Here

Call us

Call us

Visit Now

Call us

Call us

ಹಿಂದಿ, ಸಂಸ್ಕೃತ, ಪಾಲಿ, ಕನ್ನಡ, ಇಂಗ್ಲಿಷ್ ಮತ್ತಿತರ ಭಾಷೆಗಳಲ್ಲಿ ಆಳವಾದ ಪಾಂಡಿತ್ಯ ಹೊಂದಿದ್ದ ಇವರು ಜೈನಧರ್ಮದಿಂದ ಮಾರ್ಕ್ಸ್ ವಾದದವರೆಗೂ ಅಧ್ಯಯನ ಮಾಡಿದ್ದರು. ಸತತವಾದ ಓದು. ಚಿಂತನೆ, ಪರಿಶ್ರಮಗಳಿಂದ ಹಲವಾರು ವಿಶ್ವವಿದ್ಯಾಲಯಗಳಿಂದ ಎಂ.ಎ. ಪದವಿಗಳನ್ನೂ, ಮೈಸೂರು ವಿಶ್ವವಿದ್ಯಾನಿಲಯದಿಂದ ಪಿಎಚ್.ಡಿ. ಪದವಿಯನ್ನೂ ಗಳಿಸಿದ್ದಾರೆ ಮತ್ತು 52 ಪುಸ್ತಕಗಳನ್ನು, ಅನೇಕಾನೇಕ ಸಂಶೋಧನಾತ್ಮಕ ಲೇಖನಗಳನ್ನು ಪ್ರಕಟಿಸಿದ್ದಾರೆ.

ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದ ಡಾ. ಜಿ. ಭಾಸ್ಕರ್ ಮಯ್ಯ ಅವರ ವೈಚಾರಿಕ ಕೃತಿಗೆ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಇಲಾಖೆ ಪ್ರಶಸ್ತಿ ನೀಡಿ ಗೌರವಿಸಿತ್ತು. ಒಂಟಿತನ, ಪರಕೀಯಪ್ರಜ್ಞೆ ಕುರಿತ  ‘ಅಜನಬೀಪನ್: ಏಕ್ ಸೈದ್ಧಾಂತಿಕ್ ಅನುಶೀಲನ್’ ಸಂಶೋಧನಾ ಮಹಾಪ್ರಬಂಧಕ್ಕಾಗಿ 2002ರಲ್ಲಿ ಆಗಿನ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರಿಂದ ಗೌರವ ಸ್ವೀಕರಿಸಿದ್ದರು. ಮಾತೃಭಾಷೆ ಹಿಂದಿಯಲ್ಲದಿದ್ದರೂ ಭಾಷೆಯಲ್ಲಿ ಪಾಂಡಿತ್ಯ, ಪ್ರಭುತ್ವಗಳಿಸಿರುವವರ ವರ್ಗದಲ್ಲಿ ಸನ್ಮಾನಿತರಾಗಿದ್ದರು. ಇವರು ಧೀರ್ಘಕಾಲ ಕುಂದಾಪುರ ಭಂಡಾಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೋಫೆಸರ್ ಆಗಿ ಕೆಲಸ ನಿರ್ವಸಿದ್ದರು. ಭಾಸ್ಕರ್ ಮಯ್ಯ ಅವರ ನಿಧನಕ್ಕೆ ಸಾಹಿತ್ಯ ಲೋಕ ಕಂಬನಿ ಮಿಡಿದಿದೆ.

Leave a Reply

Your email address will not be published. Required fields are marked *

4 × 4 =