ಶಂಕರನಾರಾಯಣ ಠಾಣೆ ಸಿಬ್ಬಂದಿಗೆ ಕೊರೋನಾ ಶಂಕೆ. ಠಾಣೆ ಸ್ಯಾನಿಟೈಜ್, ಮನೆ ಸೀಲ್‌ಡೌನ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಜೂನ್.1: ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಓರ್ವರಿಗೆ ಕೊರೋನಾ ಪಾಸಿಟಿವ್ ಇರುವ ಶಂಕೆ ಇದ್ದು, ಮೊದಲ ವರದಿಯಲ್ಲಿ ಪಾಸಿಟಿವ್ ಬಂದಿರುವುದರಿಂದ ಮುಂಜಾಗೃತಾ ಕ್ರಮವಾಗಿ ಅವರ ಕೊಟತಟ್ಟುವಿನ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯನ್ನು ಸ್ಯಾನಿಟೈನ್ ಮಾಡಲಾಗಿದೆ. ಅವರ ಎರಡನೇ ಕೋವಿಡ್ ವರದಿಯನ್ನು ನಿರೀಕ್ಷಿಸಲಾಗಿದೆ.

Click Here

Call us

Call us

ಪೊಲೀಸರಿಗೆ ಮಾಡಲಾಗಿದ್ದ ತಪಾಸಣೆ ವೇಳೆ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಅವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಸದ್ಯ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಯಾವುದೇ ಟ್ರವೆಲ್ ಹಿಸ್ಟರಿ ಇಲ್ಲದೇ ಇರುವುದರಿಂದ ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನಾಳೆ ಕೈಸೇರುವ ನಿರೀಕ್ಷೆ ಇದೆ.
ಶಂಕರನಾರಾಯಣ ಪೊಲೀಸ್ ಠಾಣೆಯನ್ನು ಸ್ಯಾನಿಟೈನ್ ಮಾಡಿರುವುದರಿಂದ ಸದ್ಯ ಸಮೀಪದ ಶಾಲೆಯಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಬುಧವಾರ ಮತ್ತೆ ಠಾಣೆಯಲ್ಲಿಯೇ ಕರ್ತವ್ಯ ನಿರ್ವಹಿಸಲಾಗುತ್ತದೆ. ಆದರೆ ಪಾಸಿಟಿವ್ ದೃಢವಾಗುವ ತನಕ ಸೀಲ್ ಡೌನ್ ಪ್ರಕ್ರಿಯೆ ಇರುವುದಿಲ್ಲ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ದೊರೆತಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

Click here

Click Here

Call us

Visit Now

ಮಹಿಳೆ ವಾಸವಾಗಿದ್ದ ಕೋಟತಟ್ಟು ಮನೆಯ 100 ಮೀಟರ್ ಪ್ರದೇಶವನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ. ಕೋಟ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಸುತ್ತಲಿನ ಸ್ಥಳವನ್ನು ಸ್ಯಾನಿಟೈಸ್ ಮಾಡಿದ್ದಾರೆ.

ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಪೊಲೀಸರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು ಎಲ್ಲರೂ  ಜಿಲ್ಲಾ ಸಶ್ತ್ರ ಮೀಸಲು ಪಡೆಯ ಸಿಬ್ಬಂದಿಗಳು ಎನ್ನಲಾಗಿದೆ.

Call us

ಇದನ್ನೂ ಓದಿ:
► ಮಹಾಘಾತ: ಉಡುಪಿ ಜಿಲ್ಲೆಯಲ್ಲಿ ಸೋಮವಾರ 73 ಕೊರೋನಾ ಪಾಸಿಟಿವ್ – https://kundapraa.com/?p=38126 .

 

Leave a Reply

Your email address will not be published. Required fields are marked *

7 − four =