ಸುರಭಿ ರಿ. ಬೈಂದೂರು ಸಂಸ್ಥೆಯ ನೂತನ ಅಧ್ಯಕ್ಷರಾಗಿ ಸತ್ಯನಾ ಕೊಡೇರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರಿನ ಸಾಂಸ್ಕ್ರತಿಕ ಸೇವಾ ಪ್ರತಿಷ್ಠಾನ, ಸುರಭಿ ರಿ. ಬೈಂದೂರು ಇದರ ೨೦೧೯-೨೨ನೇ ಸಾಲಿನ ಅಧ್ಯಕ್ಷರಾಗಿ ನೀನಾಸಂ ಪದವೀಧರ ಶಿಕ್ಷಕ ಸತ್ಯನಾ ಕೊಡೇರಿ ಹಾಗೂ ಕಾರ್ಯದರ್ಶಿಯಾಗಿ ಶಿಕ್ಷಕ ರಾಮಕೃಷ್ಣ ಉಪ್ಪುಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ಉಪಾಧ್ಯಕ್ಷರಾಗಿ ಆನಂದ ಮದ್ದೋಡಿ, ಜತೆ ಕಾರ್ಯದರ್ಶಿಗಳಾಗಿ ಅಬ್ದುಲ್ ರವೂಫ್, ರಾಘವೇಂದ್ರ ಕೆ. ಸಂಘಟನಾ ಕಾರ್ಯದರ್ಶಿಯಾಗಿ ವೈ ಲಕ್ಷ್ಮಣ ಕೊರಗ, ಖಜಾಂಚಿಯಾಗಿ ನಾಗರಾಜ ಪಿ. ಯಡ್ತರೆ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ರಾಘವೇಂದ್ರ ಕಾಲ್ತೋಡು, ವಾಸುದೇವ ಪಡುವರಿ, ಸುನಿಲ್ ಹೆಚ್. ಜಿ. ಬೈಂದೂರು, ಗಣೇಶ ಟೈಲರ್, ಭಾಸ್ಕರ ಬಾಡ, ಗಣೇಶ ವತ್ತಿನಕಟ್ಟೆ. ನಾಗರಾಜ ಬಾಡ, ಚಂದ್ರಶೇಖರ ಶೆಟ್ಟಿ, ನಿಶ್ಚಿತಾ ಪಡುವರಿ, ವ್ಯವಸ್ಥಾಪಕರಾಗಿ ಕೃಷ್ಣಮೂರ್ತಿ ಉಡುಪ ಕಬ್ಸೆ ನಿರ್ದೇಶಕರುಗಳಾಗಿ ಸುಧಾಕರ ಪಿ. ಬೈಂದೂರು, ಗಣಪತಿ ಹೋಬಳಿದಾರ್. ಸಲಹೆಗಾರರು ಬಿ. ಜಗನ್ನಾಥ ಶೆಟ್ಟಿ ಯಡ್ತರೆ, ಜಿ. ತಿಮ್ಮಪ್ಪಯ್ಯ ಮಯ್ಯಾಡಿ, ಪ್ರಶಾಂತ ಮಯ್ಯ ದಾರಿಮಕ್ಕಿ, ಸತೀಶ್ ಹೆಮ್ಮಾಡಿ ಆಯ್ಕೆಯಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

 

Leave a Reply

Your email address will not be published. Required fields are marked *

one × one =