ಕುತೂಹಲ ಮತ್ತು ಆವಿಷ್ಕಾರ ವಿದ್ಯಾರ್ಥಿಗಳನ್ನು ಎತ್ತರಕ್ಕೆ ಕೊಂಡೊಯ್ಯುತ್ತೆ: ಡಾ. ಅಧಿತಿ ಶೆಟ್ಟಿ

Call us

Call us

ತಗ್ಗರ್ಸೆ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ವಿದ್ಯಾರ್ಥಿಗಳಲ್ಲಿ ಕುತೂಹಲ ಮತ್ತು ಆವಿಷ್ಕಾರ ಮಾಡುವ ಗುಣವಿದ್ದರೆ ಪಠ್ಯ ಚಟುವಟಿಕೆಯೊಂದಿಗೆ ಹೊಸ ಹೊಸ ಯೋಜನೆ ಯೋಜನೆಗಳನ್ನು ಅಳವಡಿಸಿಕೊಂಡು ಪ್ರಾಯೋಗಿಕ ಅನುಭವವನ್ನು ಪಡೆದುಕೊಳ್ಳಲು ಸಾಧ್ಯವಿದೆ ಎಂದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಧಿತಿ ಶೆಟ್ಟಿ ಹೇಳಿದರು.

Call us

Call us

ಅವರು ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನದ ವತಿಯಿಂದ ಆಯೋಜಿಸಲಾದ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಸಮುದಾಯದತ್ತ ಶಾಲಾ ಕಾರ್ಯಕ್ರಮದಲ್ಲಿ ರಾಮನ್ ಪ್ರಯೋಗಾಲಯವನ್ನು ಉದ್ಘಾಟಿಸಿ ಮಾತನಾಡಿದರು. ತರಗತಿಯಲ್ಲಿ ಎಷ್ಟೇ ಪಾಠ ಪ್ರವಚನಗಳನ್ನು ಮಾಡಿದರೂ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವ ದೊರೆಯದು. ವಿದ್ಯಾರ್ಥಿಗಳಿಗೆ ಪ್ರವಾಸ, ಪ್ರಾತ್ಯಕ್ಷಿಕೆ ಹಾಗೂ ವಸ್ತು ಪ್ರದರ್ಶನಗಳನ್ನು ಆಯೋಜಿಸಿ ಸುಲಭವಾಗಿ ಮನವರಿಕೆ ಮಾಡಬಹುದಾಗಿದ್ದು ಆ ದಿಸೆಯಲ್ಲಿ ತಗ್ಗರ್ಸೆ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ಆವಿಷ್ಕಾರ ಅಭಿಯಾನದ ಮೂಲಕ ಹಮ್ಮಿಕೊಂಡ ಕಾರ್ಯಕ್ರಮ ಸೃಜನಶೀಲ ಚಿಂತನೆಗೆ ದಾರಿಮಾಡಿಕೊಡುತ್ತದೆ ಎಂದರು.

ತಾಲೂಕು ಪಂಚಾಯತ್ ಸದಸ್ಯೆ ಮಾಲಿಕೆ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಶಾಲೆಯಲ್ಲಿನ ಕ್ರೀಯಾಶೀಲ ಶಿಕ್ಷಕರಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅರಳುತ್ತದೆ. ಇಂತಹ ಪರಿಸರದಲ್ಲಿ ಕಲಿಯುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯುತ್ತಾರೆ ಎಂದರು.

ಬೈಂದೂರು ಸಮೂಹ ಸಂಪನ್ಮೂಲ ವ್ಯಕ್ತಿ ದಿನಕರ್, ಗ್ರಾಮ ಪಂಚಾಯತ್ ಸದಸ್ಯೆ ಲಕ್ಷ್ಮಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ನಾಗರತ್ನ, ಸದಸ್ಯ ಲಕ್ಷ್ಮಣ ಗಾಣಿಗ ಅತಿಥಿಗಳಾಗಿದ್ದರು. ತಗ್ಗರ್ಸೆ ಶಾಲೆಯ ಮುಖ್ಯೋಪಧ್ಯಾಯ ತಿಮ್ಮಪ್ಪ ಗಾಣಿಗ ಪ್ತಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿ ಸಾರಿಕ ಬಹುಮಾನಿತರ ಪಟ್ಟಿ ವಾಚಿಸಿದರು. ರಾಷ್ಟ್ರೀಯ ಆವಿಷ್ಕಾರ ಅಭಿಯಾನದ ನೋಡೆಲ್ ಅಧಿಕಾರಿ ಸಂಗೀತಾ ಸ್ವಾಗತಿಸಿದರು. ಶಿಕ್ಷಕಿ ಭಾಗೀರಥಿ ಎಲ್. ವಂದಿಸಿದರು. ಶಿಕ್ಷಕಿ ಜ್ಯೋತಿ ಹೆಚ್. ಕಾರ್ಯಕ್ರಮ ನಿರೂಪಿಸಿದರು.

  

Leave a Reply

Your email address will not be published. Required fields are marked *

6 + 17 =