ಉಡುಪಿ ಜಿಲ್ಲೆಯ ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ಫೆ.14ರಿಂದ 6 ದಿನ ನಿಷೇಧಾಜ್ಞೆ ಜಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಫೆ13:
ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ವಿದ್ಯಾರ್ಥಿಗಳ ಸಮವಸ್ತ್ರದ ವಿವಾದದ ಹಿನ್ನಲೆಯಲ್ಲಿ ಹಾಗೂ ಜಿಲ್ಲೆಯಲ್ಲಿನ ಪ್ರಸಕ್ತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲಾ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತ ಮುತ್ತಲು 200ಮೀ ಪ್ರದೇಶವನ್ನು ಫೆ.14ರ ಬೆಳಿಗ್ಗೆ 6 ರಿಂದ ಫೆ.19ರ ಸಂಜೆ 6 ಗಂಟೆಯ ವರೆಗೆ ನಿಷೇದಾಜ್ಞೆಯನ್ನು ವಿಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಆದೇಶಿಸಿದ್ದಾರೆ.

Click here

Click Here

Call us

Call us

Visit Now

Call us

Call us

ಸಮವಸ್ತ್ರದ ವಿವಾದದ ಹಿನ್ನಲೆಯಲ್ಲಿ ಮಾನ್ಯ ಉಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ಮಧ್ಯಂತರ ಆದೇಶವಾಗಿದ್ದು ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಮಂಡಳಿ/ ಕಾಲೇಜು ಆಡಳಿತ ಮಂಡಳಿ/ಕಾಲೇಜು ಶಿಸ್ತು ಸಮಿತಿ ಮತ್ತು ಶಿಕ್ಷಕರ/ ಪಾಲಕರ ಸಭೆಗಳನ್ನು ಕೂಡಲೇ ಕರೆದು ಮಾನ್ಯ ಉಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ಮಧ್ಯಂತರ ಆದೇಶದಾದುದನ್ನು ಮನವರಿಕೆ ಮಾಡುವಂತೆ ಹಾಗೂ ಮುಂದಿನ ದಿನಗಳಲ್ಲಿ ಯಾವುದೇ ತರಹದ ಗೊಂದಲಗಳಾಗದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಕ್ಕಳ ಶಿಕ್ಷಣಕ್ಕೆ ಯಾವುದೇ ರೀತಿ ತೊಂದರೆಯಾಗದಂತೆ ಕ್ರಮ ವಹಿಸಲು ಎಲ್ಲಾ ಪದವಿಪೂರ್ವ/ ಪದವಿ ಕಾಲೇಜುಗಳ ಪ್ರಾಂಶುಪಾಲರಿಗೆ ಅಗತ್ಯ ನಿರ್ದೇಶನವನ್ನು ನೀಡಲಾಗಿದೆ

ಈ ವಿಚಾರವಾಗಿ ಸಮಾಜದ ಸಂಬಂಧಪಟ್ಟ ಸಂಘಟನೆಯ/ಮುಖಂಡರುಗಳ ಸಭೆಯನ್ನು ಕರೆದು ಮಾನ್ಯ ಉಚ್ಚ ನ್ಯಾಯಾಲಯದ ವಿಸ್ತೃತ ಪೀಠದಲ್ಲಿ ನೀಡಿರುವ ಮಧ್ಯಂತರ ಆದೇಶವನ್ನು ಪಾಲಿಸುವ ನಿಟ್ಟಿನಲ್ಲಿ ಯಾವುದೇ ಗೊಂದಲ ಆಗದಂತೆ ಶಾಂತಿ ಸುವ್ಯವಸ್ಥೆಗೆ ಭಂಗವಾಗದಂತೆ ಹಾಗೂ ಮಕ್ಕಳ ಶೈಕ್ಷಣಿಕ ಹಿತದೃಷ್ಠಿಯಿಂದ ಯಾವುದೇ ತೊಂದರೆ ಉಂಟಾಗದಂತೆ ಸಂಬಂಧಪಟ್ಟವರೊಂದಿಗೆ ಚರ್ಚಿಸಲು ಹಾಗೂ ಜಿಲ್ಲೆಯಲ್ಲಿ ಕಾನೂನು ಸುವ್ಯವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲು ಜಿಲ್ಲೆಯ ಎಲ್ಲಾ ತಹಶೀಲ್ದಾರರಿಗೆ ಈಗಾಗಲೇ ನಿರ್ದೇಶನವನ್ನು ನೀಡಲಾಗಿರುತ್ತದೆ.

ಆದ್ದರಿಂದ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಲು ವಿನಂತಿಸಲಾಗಿದೆ. ಅದೇ ರೀತಿ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ರೀತಿಯ ತಪ್ಪು ಸಂದೇಶ/ ಸುಳ್ಳು ವದಂತಿಗಳನ್ನು ಹರಡದೆ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಕೋರಿಕೊಂಡಿದ್ದಾರೆ.

Call us

Leave a Reply

Your email address will not be published. Required fields are marked *

two + six =