ಉಡುಪಿ ಜಿಲ್ಲೆಯಾದ್ಯಂತ ತಂಬಾಕು ಉತ್ಪನ್ನಗಳ ಮಾರಾಟ, ಬಳಕೆ ನಿಷೇಧ. ಉಲ್ಲಂಘಿಸಿದಲ್ಲಿ ಕ್ರಮ: ಜಿಲ್ಲಾಧಿಕಾರಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು.

Click Here

Call us

Call us

ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್‌ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು. ಕೋವಿಡ್-19 ಸೋಂಕಿತರು , ಜಗಿಯುವ ಪಾನ್‌ಮಸಾಲ, ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಕೋವಿಡ್-19 ವೈರಸ್ ಹರಡುವ ಭೀತಿ ಇರುತ್ತದೆ.

Click here

Click Here

Call us

Visit Now

ಆದ್ದರಿಂದ ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಮುಂದಿನ ಆದೇಶದವರೆಗೂ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಉತ್ಪನ್ನಗಳನ್ನು, ಉಡುಪಿ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯಿದೆ-1897, ವಿಪತ್ತು ನಿರ್ವಹಣಾ ಕಾಯಿದೆ-2005, ಐಪಿಸಿ-188,268,269 ಮತ್ತು 270 ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

ಇದನ್ನೂ ಓದಿ:
► ಹೊರ ದೇಶ ಮತ್ತು ರಾಜ್ಯದಿಂದ ಬರುವವರ ಕ್ವಾರಂಟೈನ್‌ಗೆ ಸಕಲ ವ್ಯವಸ್ಥೆ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=37398 .
► ಮುಂಬೈಯಿಗರು ಉಡುಪಿ ಜಿಲ್ಲೆಗೆ ಆಗಮಿಸಲು ಅನುಮತಿ. ಸೇವಾಸಿಂಧು ಪಾಸ್, ಕ್ವಾರಂಟೈನ್ ಕಡ್ಡಾಯ – https://kundapraa.com/?p=37387 .
► ಅಂತರಾಜ್ಯ ಸಂಚಾರಕ್ಕೆ ಸೇವಾಸಿಂಧುವಿನಲ್ಲಿ ನೊಂದಣಿ ಅಗತ್ಯ – https://kundapraa.com/?p=37276 .
► ಭಟ್ಕಳದಲ್ಲಿ ಹೆಚ್ಚಿದ ಕೋರೋನಾ ಸೋಂಕು: ಜಿಲ್ಲೆಯ ಶಿರೂರು ಗಡಿಯಲ್ಲಿ ಕಟ್ಟೆಚ್ಚರ – https://kundapraa.com/?p=37403 .
► ಕುಂದಾಪುರ: ಹೊರ ರಾಜ್ಯ, ದೇಶದಿಂದ ಬರುವವರಿಗೆ ಕ್ವಾರಂಟೈನ್ ಮಾಡಲು ಸೂಕ್ತ ವ್ಯವಸ್ಥೆ – https://kundapraa.com/?p=37420 .
► ಕೊರೋನಾ ಹರಡುವಿಕೆ ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ಕಾರ್ಯ ಶ್ಲಾಘನಾರ್ಹ – https://kundapraa.com/?p=37428 .

Call us

 

 

Leave a Reply

Your email address will not be published. Required fields are marked *

12 − seven =