ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಹಿರಿಯ ಪತ್ರಕರ್ತ, ಉದಯವಾಣಿಯಲ್ಲಿ 44 ವರ್ಷ ಸೇವೆ ಸಲ್ಲಿಸಿ ವಿಶ್ರಾಂತರಾಗಿರುವ ಎನ್. ಗುರುರಾಜ್ ಅವರಿಗೆ ಪತ್ರಕರ್ತರ ವೇದಿಕೆ ಬೆಂಗಳೂರು ನೀಡುವ ಪತ್ರಿಕಾದಿನದ ಗೌರವ (2021)ವನ್ನು ಅವರ ನಿವಾಸದಲ್ಲಿ ಹರಿಕೃಷ್ಣ ಪುನರೂರು ಅವರು ಪ್ರದಾನಿಸಲಿರುವರು ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಡಾ.ಶೇಖರ ಅಜೆಕಾರು ತಿಳಿಸಿದ್ದಾರೆ.
ಒಂದೇ ಪತ್ರಿಕೆಯಲ್ಲಿ 44 ವರ್ಷಗಳ ಕಾಲ ಸೇವೆ ಸಲ್ಲಿಸಿದ ಅವರ ಮಾಧ್ಯಮ ಸೇವೆಯನ್ನು ಗುರುತಿಸಿ ಅವರನ್ನು ಜುಲೈ23 ರಂದು ಗೌರವಿಸಲಾಗುತ್ತಿದೆ.
ದಾವಣಗೆರೆ ಜಗಳೂರಿನ ಅಸಗೋಡಿನಲ್ಲಿ 1944ರಲ್ಲಿ ಜನಿಸಿದ ಎನ್.ಗುರುರಾಜ್ ಇಂಜಿನಿಯರ್ ಪದವಿಧರರು. ಉತ್ತಮ ಕಥೆಗಾರರಾಗಿರುವ ಅವರು ಪದವಿಯ ತಕ್ಷಣ ಆಗ ತಾನೆ ಪ್ರಕಟಣೆ ಆರಂಭಿಸಲಿದ್ದ ಉದಯವಾಣಿಗೆ ಅನುವಾದಕರಾಗಿ ಸೇರಿದರು. ಮುಂದೆ ಅವರ ತಮ್ಮ ಕಾರ್ಯದಕ್ಷತೆಯಿಂದ ಸಹಾಯಕ ಸುದ್ದಿ ಸಂಪಾದಕರಾಗಿ, ಸುದ್ದಿ ಸಂಪಾದಕರಾಗಿ, ಸಂಪಾದಕರಾಗಿ 2014ರಲ್ಲಿ ಸೇವಾ ನಿವೃತ್ತಿ ಪಡೆದಿದ್ದಾರೆ. ವಿವಿಧ ಹುದ್ದೆಗಳನ್ನು ನಿರ್ವಹಿಸಿದ ಅವರಿಗೆ 2006 ರ ಕರ್ನಾಟಕ ಮಾಧ್ಯಮ ಅಕಾಡೆಮಿಯ ಗೌರವ ಸಂದಿದೆ.