ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ತಾಲೂಕಿನ ನೂತನ ತಹಶೀಲ್ದಾರರಾಗಿ ಶೋಭಾಲಕ್ಷ್ಮೀ ಹೆಚ್. ಎಸ್ ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶಿಸಿದೆ.
ಚನ್ನಗಿರಿ ತಾಲೂಕಿನ ಗ್ರೇಡ್ -2 ತಹಶೀಲ್ದಾರರಾಗಿದ್ದ ಶೋಭಾಲಕ್ಷ್ಮೀ ಅವರನ್ನು ಬೈಂದೂರಿನ ಖಾಲಿ ಇರುವ ಗೇಡ್-1 ತಹಶೀಲ್ದಾರ್ ಹುದ್ದೆಗೆ ನೇಮಕ ಮಾಡಿ ಕಂದಾಯ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ಕಳೆದ ಐದು ತಿಂಗಳಿನಿಂದ ತಹಶೀಲ್ದಾರ ಹುದ್ದೆ ಖಾಲಿಯಿದ್ದು, ಇಲಾಖಾ ಕೆಲಸಗಳಿಗೆ ಬರುವ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಕೆಲ ದಿನಗಳ ಹಿಂದಷ್ಟೇ ಕುಮಟಾದ ಅಶೋಕ ಎನ್. ಭಟ್ ಅವರನ್ನು ತಹಶೀಲ್ದಾರರನ್ನಾಗಿ ನೇಮಿಸಿ ಆದೇಶಿಸಲಾಗಿತ್ತಾದರೂ ಬಳಿಕ ನೇಮಕಾತಿ ಆದೇಶ ರದ್ದಾಗಿತ್ತು. ತಹಶೀಲ್ದಾರ್ ಬಸಪ್ಪ ಪೂಜಾರಿ ಅವರು ವರ್ಗಾವಣೆಯ ಬಳಿಕ ಬ್ರಹ್ಮಾವರದ ತಹಶೀಲ್ದಾರ್ ಕಿರಣ ಗೌರಯ್ಯ ಅವರು ಬೈಂದೂರಿನ ಪ್ರಭಾರ ತಹಶೀಲ್ದಾರರರಾಗಿ ಸೇವೆ ಸಲ್ಲಿಸುತ್ತಿದ್ದರು.
► ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ಆಕ್ಸಿಜನ್ ಉತ್ಪಾದನಾ ಘಟಕ ಮಂಜೂರು – https://kundapraa.com/?p=47985 .
► ಉಡುಪಿ ಜಿಲ್ಲೆಗೆ ಅಗತ್ಯವಿರುವ ಆಕ್ಸಿಜಿನ್, ರೆಮ್ಡಿಸಿವರ್ ಸರಬರಾಜು ಮಾಡಲು ಕ್ರಮ: ಸಚಿವ ಬೊಮ್ಮಾಯಿ – https://kundapraa.com/?p=47921 .
► ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಲಭ್ಯತೆ ಕುರಿತು ಇಲ್ಲಿದೆ ಮಾಹಿತಿ – https://kundapraa.com/?p=47896 .