ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ವರಲಕ್ಷ್ಮೀ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಬೈಂದೂರು ಶಾಖೆಯನ್ನು ಬಿಜೂರಿನ ಬಾಬು ಪೂಜಾರಿ-ಮಂಜಮ್ಮ ಪೂಜಾರಿ ದಂಪತಿಗಳು ಉದ್ಘಾಟಿಸಿದರು.
ಖ್ಯಾತ ಜ್ಯೋತಿಷಿ ರಘುನಾಥ್ ಜೊಯಿಸ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಭದ್ರತಾ ಕೊಠಡಿ ಉದ್ಘಾಟಿಸಿದರು. ಜಿ.ಪಂ ಸದಸ್ಯರಾದ ಬಾಬು ಶೆಟ್ಟಿ, ಗೌರಿ ದೇವಾಡಿಗ, ತಾ.ಪಂ ಸದಸ್ಯ ಮಹೇಂದ್ರ ಪೂಜಾರಿ, ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕುಮಾರ್ ಶೆಟ್ಟಿ ನೆಲ್ಯಾಡಿ, ಬೈಂದೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಅತಿಥಿಗಳಾಗಿದ್ದರು.
ಸಂಸ್ಥೆಯ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ, ಉಪಾಧ್ಯಕ್ಷ ಸುಧಾಕರ ಪೂಜಾರಿ, ನಿರ್ದೇಶಕರಾದ ಜಯರಾಮ ಶೆಟ್ಟಿ, ರಾಘವೇಂದ್ರ ಪೂಜಾರಿ, ನರಸಿಂಹ ನಾಯಕ್, ಪಾರ್ವತಿ ಪೂಜಾರಿ, ಮಾಲತಿ ಗೋವಿಂದ ಪೂಜಾರಿ, ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪೂಜಾರಿ, ಶಾಖಾ ಪ್ರಬಂಧಕ ವಿಲಿಯಂ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:
► ಉಡುಪಿ ಜಿಲ್ಲೆಯಲ್ಲಿ ಸೋಮವಾರ 16 ಕೊರೋನಾ ಪಾಸಿಟಿವ್ – https://kundapraa.com/?p=37874 .
► ಮುಂಜಾಗೃತಾ ಕ್ರಮವಾಗಿ ಗಂಗೊಳ್ಳಿ ಪೊಲೀಸ್ ಠಾಣೆ ಸ್ಯಾನಿಟೈಸ್ – https://kundapraa.com/?p=37856 .
► ಉಡುಪಿ ಜಿಲ್ಲೆಯಲ್ಲಿ ಭಾನುವಾರ 23 ಕೊರೋನಾ ಪಾಸಿಟಿವ್ – https://kundapraa.com/?p=37842 .
► ಕುಂದಾಪುರ ವಿಧಾನಸಭೆ ಕ್ಷೇತ್ರದ ಕ್ವಾರಂಟೈನ್ ಮಾಹಿತಿ-ದೂರಿಗಾಗಿ ಕಂಟ್ರೋಲ್ ರೂಂ – https://kundapraa.com/?p=37760 .
► ಕುಂದಾಪುರದಲ್ಲಿ120 ಬೆಡ್ಗಳ ಕೋವಿಡ್-19 ಆಸ್ಪತ್ರೆ ಸಜ್ಜು – https://kundapraa.com/?p=37752 .