ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು,ಡಿ.17: ದಾಖಲೆಗಳಿಲ್ಲದೇ ಎರ್ನಾಕುಲಂನಿಂದ ರೈಲಿನಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಾಣಿಕ ಮಾಡುತ್ತಿದ್ದ ಆರೋಪದಲ್ಲಿ ಕುಂದಾಪುರ ಹಾಗೂ ಭಟ್ಕಳ ಉಪವಿಭಾಗದ ಪೊಲೀಸರು ಮೂವರು ವ್ಯಕ್ತಿಗಳನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಭಟ್ಕಳ ಮೂಲದ ಮಹಮದ್ ಇಸ್ಮಾಯಿಲ್, ರಾಹೀಫ್, ಸಯ್ಯದ್ ಉಮ್ಮೆರ್ ಭಟ್ಕಳ್ ಅವರುಗಳಿಂದ ಒಟ್ಟು 61.47 ಲಕ್ಷ ರೂ. ಬೆಲೆಯ,1.633 ಕೆಜಿ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ರೈಲಿನಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಕುಂದಾಪುರ ಎಎಸ್ಪಿ ಹರಿರಾಮ್ ಶಂಕರ್ ಅವರು ಕುಂದಾಪುರ, ಬೈಂದೂರು, ಭಟ್ಕಳ ರೈಲು ನಿಲ್ದಾಣಗಳಲ್ಲಿ ಪೊಲೀಸರನ್ನು ನಿಯೋಜಿಸಿ, ಅದರಂತೆ ಬೈಂದೂರಿನಲ್ಲಿ ಓರ್ವ ಹಾಗೂ ಭಟ್ಕಳ ರೈಲ್ವೆ ನಿಲ್ದಾಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ ಎಸ್ಪಿ ನಿಶಾ ಜೇಮ್ಸ್ ಅವರ ಮಾರ್ಗದರ್ಶನದಲ್ಲಿ ಕುಂದಾಪುರ ಎಎಸ್ಪಿ ಹರಿರಾಮ್ ಶಂಕರ್, ಭಟ್ಕಳ ಎಎಸ್ಪಿ ನಿಖಿಲ್, ಬೈಂದೂರು ವೃತ್ತ ನಿರೀಕ್ಷಕ ಸುರೇಶ್ ನಾಯಕ್, ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ, ಕುಂದಾಪುರ ಎಸ್ಐ ಹರೀಶ್ ಆರ್. ನಾಯ್ಕ್, ಪ್ರೊಬೇಶನರಿ ಪಿಎಸ್ಐ ಸುದರ್ಶನ್, ಕುಂದಾಪುರ ಎಎಸ್ಪಿ ತಂಡದ ಸಂತೋಷ್ ಹೊನ್ನಾಳ, ಮಂಜುನಾಥಪ್ರಿನ್ಸ್, ಚಂದ್ರಶೇಖರ, ಮೋಹನ್, ಸಂತೋಷ್ ಕೊರವಡಿ, ಸಲೀಂವುಲ್ಲಾ, ವಿಜಯ ಕುಮಾರ್, , ಕೃಷ್ಣ, ಮೊದಲಾದವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.