ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಸ್ವತಂತ್ರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಉತ್ತಮ ಸಾಧನೆ ತೋರಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ವೈಷ್ಣವಿ ಶೆಟ್ಟಿ 579 ಅಂಕ, ಅಮೃತಾ ಕೆ. 579 ಅಂಕ, ಕಲಾ ವಿಭಾಗದಲ್ಲಿ ಪೂರ್ಣಿಮಾ ಎಂ. 549 ಅಂಕ ಪಡೆದು ಕಾಲೇಜಿಗೆ ಟಾಪರ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವನಿತಾ 575 ಅಂಕ ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನಿಯಾಗಿದ್ದಾಳೆ.
ಕಾಲೇಜಿನಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 72 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ತೇರ್ಗಡೆಯಾಗಿದ್ದು, ಕಲಾ ವಿಭಾಗದಲ್ಲಿ 74%, ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ಬಂದಿದ್ದು, ಕಾಲೇಜಿಗೆ ಒಟ್ಟು 90.28% ಫಲಿತಾಂಶ ಬಂದಿದೆ.