ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿಗೆ 98.68% ಫಲಿತಾಂಶ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು 98.68% ಫಲಿತಾಂಶ ಗಳಿಸಿದೆ. ಪರೀಕ್ಷೆಗೆ ಹಾಜರಾದ ಒಟ್ಟು 76 ವಿದ್ಯಾರ್ಥಿಗಳಲ್ಲಿ 75 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 33 ವಿಶಿಷ್ಟ ಶ್ರೇಣಿ, 41 ಪ್ರಥಮ ಶ್ರೇಣಿ ಹಾಗೂ ಓರ್ವ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಕುಮಾರಿ ಸಹನಾ ಭಟ್ ಕೆ (581) ಹಾಗೂ ವಿಜ್ಞಾನ ವಿಭಾಗದಲ್ಲಿ ಕುಮಾರಿ ಚೈತನ್ಯಲಕ್ಷ್ಮಿ (572) ಪ್ರಥಮ ಸ್ಥಾನ ಗಳಿಸಿರುತ್ತಾರೆ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರತಿಶತ 100 ಫಲಿತಾಂಶ ಪಡೆದಿದೆ ಎಂದು ಕಾಲೇಜಿನ ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.

Call us

Call us

Leave a Reply

Your email address will not be published. Required fields are marked *

four × 2 =