ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗೋಳಿಹೊಳೆ ಶಾಖೆ ಲೋಕಾರ್ಪಣೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮಾಜದ ಎಲ್ಲಾ ವರ್ಗದ ಬಡವರನ್ನು ಗುರುತಿಸಿ ಅವರನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಬಲಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕೆಂಬ ಉದ್ದೇಶದೊಂದಿಗೆ ಆರಂಭಗೊಂಡ ಸಹಕಾರಿ ಚಳುವಳಿಯ ಆಶಯಗಳು ಸಹಕಾರಿ ಸಂಸ್ಥೆಗಳ ಮೂಲಕ ಸಾಕಾರಗೊಳ್ಳಲಿ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದೂಳಿದ ವರ್ಗಗಳ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.

Call us

Call us

Visit Now

ಅವರು ಗೊಳಿಹೊಳೆ ಮೂರುಕೈ ಬಳಿ ತಾಯಿ ಮರ್ಲಚಿಕ್ಕು ಕಾಂಪ್ಲೆಕ್ಸ್‌ನಲ್ಲಿ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಇದರ ನೂತನ ಶಾಖೆಯನ್ನು ಲೋಕಾರ್ಪಣೆಗೊಳಿಸಿದ ಬಳಿಕ ದಿ. ಜಿ.ಎಸ್. ಆಚಾರ್ಯ ಹಾಗೂ ದಿ. ಎಸ್. ರಾಮ ಪೂಜಾರಿ ಅವರ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದರು. ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗ್ರಾಮೀಣ ಭಾಗದ ಜನರಿಗೆ ಉತ್ತಮ ಸೇವೆಯನ್ನು ನೀಡಿ ಯಶಸ್ಸನ್ನು ಕಾಣುವಂತಾಗಲಿ. ಎಂದವರು ಹಾರೈಸಿದರು.

Click here

Click Here

Call us

Call us

ಬೈಂದೂರು ಶಾಸಕ ಕೆ. ಗೋಪಾಲ ಪೂಜಾರಿ ಭದ್ರತಾ ಕೊಠಡಿ ಉದ್ಘಾಟಿಸಿದರು. ರಾಜ್ಯ ಸೌಹಾರ್ದ ಸಹಕಾರಿ ನಿರ್ದೇಶಕ ಭಾಸ್ಕರ್ ಕಾಮತ್ ಉಡುಪಿ ಕಂಪ್ಯೂಟರ್‌ಗೆ ಚಾಲನೆ ನೀಡಿದರು.

Click Here

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಪ್ತಾಸ್ತಾವಿಕ ಮಾತುಗಳನ್ನಾಡಿ ಸಚಿವ ಆಂಜನೇಯ ಅವರ ಭೇಟಿಯ ನೆನಪಿಗಾಗಿ ಸಹಕಾರಿಯು ಬಡತನದಲ್ಲಿ ಶೈಕ್ಷಣಿಕ ಸಾಧನೆಗೈಯುವ ಇಬ್ಬರು ಪದವಿ ವಿದ್ಯಾರ್ಥಿಗಳನ್ನು ದತ್ತು ಪಡೆದು ಅವರ ಶಿಕ್ಷಣಕ್ಕೆ ನೆರವಾಗುವ ಘೋಷಣೆ ಮಾಡಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ, ತಾಲೂಕು ಪಂಚಾಯತ್ ಸದಸ್ಯ ವಿಜಯ ಶೆಟ್ಟಿ, ಮಾಜಿ ಸದಸ್ಯ ರಮೇಶ್ ಗಾಣಿಗ ಕೊಲ್ಲೂರು, ಕಾಲ್ತೋಡು ಗ್ರಾ.ಪಂ ಉಪಾಧ್ಯಕ್ಷ ರಾಜು ಪೂಜಾರಿ, ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ರಘುರಾಮ ಶೆಟ್ಟಿ, ಕಂಬದಕೋಣೆ ರೈತರ ಸೇವಾ ಸಹಕಾರಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಉದ್ಯಮಿ ಗೋಕುಲ್ ಶೆಟ್ಟಿ, ನಾರಾಯಣ ಶೆಟ್ಟಿ ಚುಚ್ಚಿ, ರತ್ನಾಕರ ಶೆಟ್ಟಿ ಜನ್ಮನೆ, ಶ್ರಿರಾಮ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ಎಂ. ವಿನಾಯಕ ರಾವ್, ನಿರ್ದೇಶಕ ಮಂಜು ಪೂಜಾರಿ, ನವೋದಯ ಸಂಘಗಳ ವಲಯ ಮೇಲ್ವಿಚಾರಕ ಶಿವರಾಮ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ವಂದಿಸಿದರು. ನಾಗೂರು ಶಾಖಾ ಪ್ರಬಂಧಕ ರಾಜೇಂದ್ರ ದೇವಾಡಿಗ ಸಹಕರಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

Sriram souharda co-operative byndoor’s new golihole branch inaugurated

Leave a Reply

Your email address will not be published. Required fields are marked *

two × four =