ರಾಜ್ಯ ಬಜೆಟ್: ಉಡುಪಿ ಜಿಲ್ಲೆಗೆ ದೊರಕಿದ್ದೇನು?

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ 2020-21 ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ. ಕರಾವಳಿ ಜಿಲ್ಲೆಗಳ ಬಂದರು ಅಭಿವೃದ್ದಿ, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ, ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿ ಪ್ರಾಶಸ್ತ್ಯ ನೀಡಲಾಗಿದೆ.

Click Here

Call us

Call us

ಬಜೆಟ್‌ನಲ್ಲಿರುವ ಕರಾವಳಿಯ ಪ್ರಮುಖ ಅಂಶಗಳು:
* ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ‘ಕಿಂಡಿ ಅಣೆಕಟ್ಟು ಯೋಜನೆ’ಗಳ ವ್ಯಾಪಕ ಅನುಷ್ಠಾನಕ್ಕೆ ಮಾಸ್ಟರ್ ಪ್ಲಾನ್.
* ಮಹಿಳಾ ಮೀನುಗಾರರ ಸಬಲೀಕರಣ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ.
* ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ
* ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವುಳಿ ಪಾರ್ಕ್.
* ಉಡುಪಿಯ ಅಂಗಾರು ಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ. ಅನುದಾನ.
* ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲ್ಲಿ ಪರಿಷ್ಕೃತ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ.
* ಉಡುಪಿಯಲ್ಲಿರುವ ಸ್ಕೌಟ್ಸ್ ಮತ್ತು ಗೈಡ್ಸ್ ಕೇಂದ್ರಗಳಿಗೆ ನಾಲ್ಕು ಕೋಟಿ ರೂ. ಅನುದಾನ(ಹೊರ ಜಿಲ್ಲೆಯೂ ಸೇರಿದೆ)
* ಆಧುನಿಕ ಮೀನುಗಾರಿಕೆ ತಾಂತ್ರಿಕತೆ ಅಳವಡಿಕೆಯ ಉತ್ತೇಜನಕ್ಕೆ 1.5 ಕೋಟಿ ರೂ. ವೆಚ್ಚದಲ್ಲಿ “ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ’ ಜಾರಿ. ಇದರಲ್ಲಿ ಪಶ್ಚಿಮ ವಾಹಿನಿ ಯೋಜನೆ, ವಿವಿಧ ಮೀನುಗಾರಿಕಾ ಬಂದರು ಅಭಿವೃದ್ಧಿ, ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿಯಂತಹ ಕಾರ್ಯಕ್ರಮಗಳು ಸೇರಿವೆ.
* ಅಡಿಕೆ ಬೆಳೆಗಾರರ ಪ್ರಾಥಮಿಕ/ ಮಾರುಕಟ್ಟೆ ಸಹಕಾರ ಸಂಘಗಳಲ್ಲಿ ಪ್ರತಿ ರೈತ ಕುಟುಂಬಕ್ಕೆ ನೀಡುವ ದೀರ್ಘಾವಧಿ ಕೃಷಿ ಸಾಲದ ಪೈಕಿ ಗರಿಷ್ಠ ಎರಡು ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.5 ರಷ್ಟು ಬಡ್ಡಿ ವಿನಾಯಿತಿ

Click here

Click Here

Call us

Visit Now

Leave a Reply

Your email address will not be published. Required fields are marked *

sixteen + fourteen =