ಗಣೇಶೋತ್ಸವ ಆಚರಣೆಗೆ ನಿಯಮ ಸಡಿಲಿಸಿದ ಸರ್ಕಾರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಗೆ ಆ.14ರಂದು ಸರಕಾರ ಜಾರಿಮಾಡಿದ್ದ ಮಾರ್ಗಸೂಚಿಯಲ್ಲಿ ಸಡಿಲಿಕೆ ಮಾಡಲಾಗಿದೆ.

Click Here

Call us

Call us

ಪರಿಷ್ಕೃತ ಮಾರ್ಗಸೂಚಿ:

Click here

Click Here

Call us

Visit Now

  • ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ದೇವಸ್ಥಾನ, ಮನೆ ಅಥವಾ ಸರ್ಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.
  • ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸುವುದು.
  • ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಷಿಪಲ್ ಕಾರ್ಪೋರೇಷನ್/ಸ್ಥಳೀಯ ಆಡಳಿತದ ಪೂರ್ವಾನುಮತಿ ಪಡೆಯುವುದು. ಒಂದು ವಾರ್ಡಿಗೆ/ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವ ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು.
  • ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು.
  • ಯಾವುದೇ ರೀತಿಯ ಸಾಂಸ್ಕೃತಿ/ಸಂಗೀತ/ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.
  • ಗಣೇಶ ಮೂರ್ತಿಯನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
  • ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯನ್ನು ಮನೆಯಲ್ಲಿಯೇ ಹಾಗೂ ಸಾರ್ವಜನಿಕ ಗಣೇಶ ಮೂರ್ತಿಯನ್ನು ಸ್ಥಳೀಯ ಸಂಸ್ಥೆಗಳು ಈಗಾಗಲೇ ನಿರ್ಮಿಸಿರುವು ಮೊಬೈಲ್ ಟ್ಯಾಂಕ್ ಅಥವಾ ಕೃತಕ ಹೊಂಡದಲ್ಲಿ ವಿಸರ್ಜಿಸುವುದು.
  • ದರ್ಶನಕ್ಕಾಗಿ ಆಗಮಿಸುವುದ ಭಕ್ತರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು. ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಸುವುದು ಕಡ್ಡಾಯ.

 

 

Leave a Reply

Your email address will not be published. Required fields are marked *

18 − 14 =