ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸುರಭಿ ಬೈಂದೂರು ಕಲಾಸಂಸ್ಥೆಯ ನಿರ್ದೇಶಕ, ಶಿಕ್ಷಕ ಸುಧಾಕರ ಪಿ. ಬೈಂದೂರು ಅವರಿಗೆ ಬೈಂದೂರು ಜೆಸಿಐ ಸಿಟಿಯ ಜೆಸಿ ಸಂಭ್ರಮ-2020ರ ಸಂದರ್ಭ ಸಾಧನಾಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇಲ್ಲಿನ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ವಲಯಾಧ್ಯಕ್ಷ ಮಣಿಕಂಠ ಎಸ್, ಬೈಂದೂರು ಜೆಸಿಐ ನಿಕಟಪೂರ್ವಾಧ್ಯಕ್ಷೆ ಪ್ರಿಯದರ್ಶಿನಿ ಬೆಸ್ಕೂರು, ಜೆಸಿಐ ಅಧ್ಯಕ್ಷ ಶ್ರೀಧರ ಆಚಾರ್ಯ, ನಿಕಟಪೂರ್ವ ಜೆಜೆಸಿ ಅಧ್ಯಕ್ಷೆ ಭಾನುಮತಿ ಬಿ. ಕೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.