ಜ.23ರಿಂದ ಸುರಭಿ ಜೈಸಿರಿ – ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಹತ್ತೊಂಬತ್ತನೇ ವರ್ಷದ ಸಂಭ್ರಮದಲ್ಲಿರುವ ಬೈಂದೂರಿನ ಸಾಂಸ್ಕೃತಿಕ ಸೇವಾ ಪ್ರತಿಷ್ಠಾನ ‘ಸುರಭಿ ರಿ. ಬೈಂದೂರು’ ಸಂಸ್ಥೆಯ ಆಶ್ರಯದಲ್ಲಿ ದಿ. 23, 24 ಹಾಗೂ 25 ಜನವರಿ 2019ರಂದು ಮೂರು ದಿನಗಳ ಕಾಲ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಪ್ರತಿದಿನ ಸಂಜೆ 6ಕ್ಕೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಜರುಗಲಿದೆ ಎಂದು ಸುರಭಿ ರಿ. ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ ತಿಳಿಸಿದರು.

ಬೈಂದೂರಿನಲ್ಲಿ ಜರುಗಿದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರತಿವರ್ಷ ಕೊಡಮಾಡುತ್ತಿರುವ ಬಿಂದಶ್ರೀ ಪ್ರಶಸ್ತಿಗೆ ಈ ಭಾರಿ ಪ್ರಸಿದ್ಧ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದ ರಮೇಶ್ ಭಟ್ ಆಯ್ಕೆಯಾಗಿದ್ದು ಜ.24ರಂದು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಚಿನ್ನದ ಪದಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಜನವರಿ 23ರ ಸಂಜೆ 6ಕ್ಕೆ ಚಾಲನೆಗೊಳ್ಳಲಿರುವ ಸುರಭಿ ಜೈಸಿರಿಯನ್ನು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಉದ್ಘಾಟಿಸಲಿದ್ದು, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಬೈಂದೂರು ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್‌ನ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಶುಭಶಂಸನೆಗೈಲಿದ್ದು, ಜಿ.ಪಂ ಸದಸ್ಯ ಸುರೇಶ್ ಬಟವಾಡಿ, ತಾ.ಪಂ ಸದಸ್ಯೆ ಸುಜಾತ ದೇವಾಡಿಗ, ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ವಸಂತ ಹೆಗ್ಡೆ, ಕ.ರಾ.ಪ್ರಾ. ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಉದ್ಯಮಿ ಶ್ರೀಧರ ಬೆಲೆಮನೆ, ಜೆಸಿಐ ಶಿರೂರು ಅಧ್ಯಕ್ಷ ನಾಗೇಶ್ ಕೆ. ಮೊದಲಾದವರು ಉಪಸ್ಥಿತರಿರಲಿದ್ದಾರೆ. ಅಂದು ಸಂಗೀತ ಕಲಾವಿದೆ ಗೌರಿ ಅವರನ್ನು ಸನ್ಮಾನಿಸಲಾಗುತ್ತದೆ.

ಜನವರಿ 24ರ ಗುರುವಾರ ಸಂಜೆ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಪ್ರಸಿದ್ಧ ರಂಗಭೂಮಿ ಮತ್ತು ಚಲನಚಿತ್ರ ನಟ ರಮೇಶ್ ಭಟ್ ಅವರಿಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ ಸದಸ್ಯ ಶಂಕರ ಪೂಜಾರಿ ಶುಭಶಂಸನೆಗೈಯಲಿದ್ದಾರೆ. ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ಜಯಾನಂದ ಹೋಬಳಿದಾರ್, ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಂದಿನಿ ಬಿ., ಉದ್ಯಮಿ ಪ್ರಕಾಶ್ ಭಟ್ ಉಪ್ಪುಂದ, ಜೆಸಿಐ ಬೈಂದೂರು ಅಧ್ಯಕ್ಷ ಮಣಿಕಂಠ ಉಪಸ್ಥಿತರಿರಲಿದ್ದಾರೆ.

ಜನವರಿ 25ರ ಶುಕ್ರವಾರ ಸಂಜೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ವಹಿಸಿಕೊಳ್ಳಲಿದ್ದು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಸಮಾರೋಪ ನುಡಿಗಳನ್ನಾಡಲಿದ್ದಾರೆ. ಅತಿಥಿಗಳಾಗಿ ಬೈಂದೂರು ರೋಟರಿ ಅಧ್ಯಕ್ಷ ಐ. ನಾರಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್. ಚಂದ್ರಶೇಖರ್, ಬೈಂದೂರು ಸೇನೇಶ್ವರ ದೇವಳದ ಆಡಳಿತ ಮೊಕ್ತೇಸರ ಚನ್ನಕೇಶವ ಉಪಾಧ್ಯಾಯ, ಬೈಂದೂರು ಜೆಸಿರೇಟ್ ಅಧ್ಯಕ್ಷ ಪ್ರಿಯದರ್ಶಿನಿ ಕಮಲೇಶ್ ಬೆಸ್ಕೂರು, ಎಸ್‌ಸಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಶಿವರಾಮ ಪೂಜಾರಿ ಯಡ್ತರೆ, ಜೆಸಿಐ ಉಪ್ಪುಂದ ಅಧ್ಯಕ್ಷ ಪುರಂದರ ಖಾರ್ವಿ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಅಂದು ಹಿರಿಯ ಯಕ್ಷಗಾನ ಕಲಾವಿದ ಹೆರಂಜಾಲು ಸುಬ್ಬಣ್ಣ ಗಾಣಿಗ ಅವರನ್ನು ಸನ್ಮಾನಿಸಲಾಗುವುದು.

ಸಾಂಸ್ಕೃತಿಕ ಕಾರ್ಯಕ್ರಮಗಳು:
ಸುರಭಿ ಸಂಸ್ಥೆಯ ಕಲಾವಿದರಿಂದ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ. ಜನವರಿ ೨೩ರಂದು ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ನಿರ್ದೇಶನದಲ್ಲಿ ಗಾನಸಿಂಚನ, ಜಾದುಗಾರ ಸತೀಶ್ ಹೆಮ್ಮಾಡಿ ನಿರ್ದೇಶನದಲ್ಲಿ ಜಾದುಜಾತ್ರೆ, ಹಾಗೂ ಗಿರೀಶ್ ಗಾಣಿಗ ತಗ್ಗರ್ಸೆ ನಿರ್ದೇಶನದಲ್ಲಿ ವಿದ್ಯಾರ್ಥಿಗಳಿಂದ ಕಲಾಕುಂಚ ವೈಭವ ಹಾಗೂ ಪ್ರದರ್ಶನ ಜರುಗಲಿದೆ

ಜನವರಿ 24ರಂದು ನರ್ತನ ಮಿಲನ ಕಾರ್ಯಕ್ರಮದಲ್ಲಿ ಶ್ರೀ ನಾಟ್ಯಾಂಜಲಿ ಕಲಾ ಅಕಾಡೆಮಿ ಸುರತ್ಕಲ್ ಹಾಗೂ ನೃತ್ಯ ಸುರಭಿ ಹಿರಿಯ ವಿದ್ಯಾರ್ಥಿಗಳಿಂದ ವಿದ್ವಾನ್ ಚಂದ್ರಶೇಖರ ನಾವಡ ನಿರ್ದೇಶನದಲ್ಲಿ ಸಂಭವಾಮಿ ಯುಗೇ ಯುಗೇ ಭರತನಾಟ್ಯ ರೂಪಕ ಪ್ರದರ್ಶನಗೊಳ್ಳಲಿದೆ.

ಜನವರಿ 25ರಂದು ಯಕ್ಷಹೆಜ್ಜೆ ಕಾರ್ಯಕ್ರಮದಲ್ಲಿ ಪ್ರಶಾಂತ ಮಯ್ಯ ದಾರಿಮಕ್ಕಿ ನಿರ್ದೇಶನದಲ್ಲಿ ವೀರಮಣಿ ಕಾಳಗ, ಜಾಂಬವತಿ ಕಲ್ಯಾಣ ಯಕ್ಷಗಾನ ಹಾಗೂ ಮಂಜುಳಾ ಜನಾರ್ದನ ಅವರ ನಿರ್ದೇಶನದಲ್ಲಿ ನೃತ್ಯಧಾರೆ ಜರುಗಲಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸುರಭಿ ರಿ. ಬೈಂದೂರು ಕಾರ್ಯದರ್ಶಿ ರಾಮಕೃಷ್ಣ ಉಪ್ಪುಂದ, ಉಪಾಧ್ಯಕ್ಷ ಆನಂದ ಮದ್ದೋಡಿ, ಸಂಘಟನಾ ಕಾರ್ಯದರ್ಶಿ ಲಕ್ಷ್ಮಣ ವೈ. ಕೊರಗ, ನಿರ್ದೇಶಕ ಸುಧಾಕರ ಪಿ. ಬೈಂದೂರು ಇದ್ದರು.

 

Leave a Reply

Your email address will not be published. Required fields are marked *

fourteen − nine =