ಕಲೆಗೆ ಸ್ವಾಯತ್ತತೆ ದೊರೆತಾಗ ಅಭಿಪ್ರಾಯ ಗಟ್ಟಿಯಾಗುವುದು: ಡಾ. ರಘು ನಾಯ್ಕ್

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜರ ಕಾಲದಿಂದ ಇಂದಿನತನಕವೂ ಕಲಾ ಪ್ರಕಾರಗಳು ಆಶ್ರಯದಲ್ಲಿಯೇ ಬೆಳೆದು ಬರುತ್ತಿವೆ. ಆದರೆ ಕಲೆಗೆ ಸ್ವಾಯತ್ತತೆ ದೊರೆಯುವ ಅವಕಾಶ ಮಾಡಿಕೊಟ್ಟಾಗ ಅದು ಮತ್ತುಷ್ಟು ಗಟ್ಟಿಗೊಳ್ಳುತ್ತವೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಹೇಳಿದರು.

Click here

Click Here

Call us

Call us

Visit Now

Call us

Call us

ಅವರು ಸುರಭಿ ರಿ. ಬೈಂದೂರು ಹಾಗೂ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ರಂಗ ಸುರಭಿ ೨೦೨೦ – ಶಿಶಿರ ನಾಟಕೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಂಡೆ ಹಾಗೂ ತಬಲ ವಾದಕ ಗೋಪಾಲಕೃಷ್ಣ ಜೋಷಿ ಉಪ್ಪುಂದ ಅವರನ್ನು ಸನ್ಮಾನಿಸಲಾಯಿತು. ರತ್ತೂಬಾಯಿ ಜನತಾ ಪ್ರೌಢಶಾಲೆಯ ಮುಖ್ಯೋಪಧ್ಯಾಯ ಮಂಜು ಕಾಳಾವರ ಅಧ್ಯಕ್ಷತೆ ವಹಿಸಿದ್ದರು. ಉಪ್ಪುಂದದ ವೈದ್ಯ ಎ.ಎಸ್. ಉಡುಪ, ಸುರಭಿ ಬೈಂದೂರು ಅಧ್ಯಕ್ಷ ಸತ್ಯನಾ ಕೊಡೇರಿ, ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಉಪಸ್ಥಿತರಿದ್ದರು.

ನಿರ್ದೇಶಕ ಸುಧಾಕರ ಪಿ. ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಂಗಾಯಣ ಮೈಸೂರು ಪ್ರಸ್ತುತಿಯ, ಶರವಣ್ ಕುಮಾರ್ ರಚಿಸಿ ನಿರ್ದೇಶಿಸಿದ ರೆಕ್ಸ್ ಆವರ್ಸ್ ನಾಟಕ ಪ್ರದರ್ಶನಗೊಂಡಿತು.

Leave a Reply

Your email address will not be published. Required fields are marked *

five × four =