ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್’ನಿಂದ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 3,700 ದಿನಸಿ ಕಿಟ್ ವಿತರಣೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಗೋವಿಂದ ಬಾಬು ಪೂಜಾರಿ ಅವರ ನೇತೃತ್ವದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಅಗತ್ಯವುಳ್ಳ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಸುಮಾರು 3,700 ಕಿಟ್’ಗಳನ್ನು ವಿತರಿಸಲಾಯಿತು.

Call us

Call us

Call us

Call us

ಈ ಸಂದರ್ಭ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಕೋರೋನಾ ಲಾಕ್ಡೌನ್ ಕಾರಣದಿಂದ ಜನಸಾಮಾನ್ಯರು, ದಿನನಿತ್ಯ ದುಡಿದು ತಿನ್ನುವವರಿಗೆ ಸಾಕಷ್ಟು ತೊಂದರೆ ಆಗಿದೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಟ್ರಸ್ಟ್ ಮೂಲಕ ನಮ್ಮೂರಿನ ಜನರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬೈಂದೂರಿನಲ್ಲಿ ಆಶಾ ಕಾರ್ಯಕರ್ತರು, ಆರೋಗ್ಯ ಕಾರ್ಯಕರ್ತರು ಹಾಗೂ ಪೌರ ಕಾರ್ಮಿಕರಿಗೆ ದಿನಸಿ ಕಿಟ್, ಮಾಸ್ಕ್ ಸ್ಯಾನಿಟೈಸರ್ ನೀಡಿರುವುದಲ್ಲದೇ ಧನಸಹಾಯವನ್ನು ಮಾಡಲಾಗಿದೆ. ಮುಂದುವರಿದು ಪ್ರತಿ ಗ್ರಾಮಗಳಿಗೂ ಜಿಬಿಪಿ ಜನಸೇವಾ ಸಂಘದ ಮೂಲಕ ಅಗತ್ಯವುಳ್ಳವರನ್ನು ಗುರುತಿಸಿ ಅವರಿಗೆ ಆಹಾರದ ಕಿಟ್ ವಿತರಿಸಲಾಗುತ್ತಿದೆ. ಬೆಂಗಳೂರಿನಲ್ಲಿಯೂ ಆಟೋ ಚಾಲಕರು, ಪೌರಕಾರ್ಮಿಕರಿಗೆ ಆಹಾರದ ಕಿಟ್ ವಿತರಿಸಿ, ಧನಸಹಾಯ ಮಾಡಲಾಗಿದೆ ಎಂದರು.

ಜಿಬಿಪಿ ಜನಸೇವಾ ಸಂಘದ ನೇತೃತ್ವದಲ್ಲಿ ಸ್ವಯಂಸೇಕರುಗಳ ಮೂಲಕ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮಗಳ ಅಗತ್ಯವುಳ್ಳವರನ್ನು ಗುರುತಿಸಿ ಅವರಿಗೆ ಕಿಟ್ ವಿತರಿಸುವ ಕಾರ್ಯ ಮಾಡಲಾಗಿದ್ದು, ಈ ಕಾರ್ಯಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

thirteen − 3 =