ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ 4ನೇ ಮನೆ ‘ಶ್ರೀ ವರಲಕ್ಷ್ಮೀ ನಿಲಯ’ ಹಸ್ತಾಂತರ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಹೊಸಾಡು ಭಗತ್ ನಗರದಲ್ಲಿ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ‘ಶ್ರೀ ವರಲಕ್ಷ್ಮೀ ನಿಲಯ’ ನೂತನ ಗೃಹದ ಹಸ್ತಾಂತರ ಸಮಾರಂಭ ಭಾನುವಾರ ಜರುಗಿತು.

Call us

Click Here

Click here

Click Here

Call us

Visit Now

Click here

ಉದ್ಯಮಿ ಹಾಗೂ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರ ತಂದೆ ತಾಯಿ ಬಾಬು ಪೂಜಾರಿ ಹಾಗೂ ಮಂಜಮ್ಮ ದಂಪತಿಗಳು ನೂತನ ಗೃಹವನ್ನು ಉದ್ಘಾಟಿಸಿದರು. ಗೋವಿಂದ ಬಾಬು ಪೂಜಾರಿ ಅವರು ಪುಷ್ಪಾ ಉಲ್ಲಾಸ್ ದಂಪತಿಗಳಿಗೆ ಮನೆಯ ಬಿಗದ ಕೈ ಹಸ್ತಾಂತರಿಸಿದರು.

ಶ್ರೀ ವರಲಕ್ಷ್ಮೀ ಈ ಸಂದರ್ಭ ಮ್ಯಾನೇಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಮಾತನಾಡಿ ಟ್ರಸ್ಟೀ ಮೂಲಕ ನಿರ್ಮಿಸಲಾಗಿರುವ ನಾಲ್ಕನೇ ಮನೆ ಇದಾಗಿದ್ದು, ಇನ್ನು ಒಂದು ಮನೆಗಳು ನಿರ್ಮಾಣ ಹಂತದಲ್ಲಿದೆ. ಆರೋಗ್ಯ ಸೇವೆ, ಅಗತ್ಯವುಳ್ಳವರಿಗೆ ನೆರವು, ಪುಡ್ ಕಿಟ್ ವಿತರಣೆ ಸೇರಿದಂತೆ ಹತ್ತಾರು ಸಾಮಾಜಿಕ ಕಾರ್ಯಗಳನ್ನು ಟ್ರಸ್ಟ್ ಮೂಲಕ ಮಾಡಲಾಗುತ್ತಿದೆ ಎಂದರು.

ಗೋವಿಂದ ಬಾಬು ಪೂಜಾರಿ ಅವರನ್ನು ಪುಷ್ಪಾ ಉಲ್ಲಾಸ್ ದಂಪತಿಗಳು ಹಾಗೂ ಸೇವಾ ಸಂಕಲ್ಪ ತಂಡದಿಂದ ಗೌರವಿಸಲಾಯಿತು. ಈ ಸಂದರ್ಭ ಸೇವಾ ಸಂಕಲ್ಪ ತಂಡದ ಸದಸ್ಯರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

1 × 5 =