ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಲ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ ಗೌರವ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವದೆಹಲಿಯ ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಲದ ವತಿಯಿಂದ ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ʼನ್ಯಾಷನಲ್ ಕಾನ್ಲೇವ್ʼನಲ್ಲಿ ಬ್ಯಾಂಕಿನ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು.

Call us

Call us

ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಲದ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಾಗವತ್ ಕಿಸಾನ್ ರಾವ್ ಕರಾಡ್, ಕೇಂದ್ರ ಸಹಕಾರ ಖಾತೆಯ ರಾಜ್ಯ ಸಚಿವ ಬಿ. ಎಲ್ ವರ್ಮ ಪ್ರಶಸ್ತಿ ಪ್ರದಾನ ಮಾಡಿದರು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಶೆಟ್ಟಿ ಬ್ಯಾಂಕಿನ ಪರವಾಗಿ ಗೌರವ ಸ್ವೀಕರಿಸಿದರು.

Leave a Reply

Your email address will not be published. Required fields are marked *

eighteen + 9 =