ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಡಾ|| ಸರ್ವೇಪಳ್ಳಿ ರಾಧಾಕೃಷ್ಣನ್‌ರವರ ಜನ್ಮದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ದೀಪ ಬೆಳಗಿಸಿ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜಾ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿ’ಸೋಜಾ ರವರು ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಭೋದಕ ಹಾಗೂ ಭೋದಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು.