ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ವಂಡ್ಸೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಾತ್ಕಾಲಿಕ ವಾಹನವನ್ನು ಕೊಡುಗೆಯಾಗಿ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಸಬ್ಲಾಡಿ ಎನ್.ಮಂಜಯ್ಯ ಶೆಟ್ಟಿ, ಉಪಾಧ್ಯಕ್ಷ ಜಗನ್ನಾಥ ಶೆಟ್ಟಿ, ನಿರ್ದೇಶಕರಾದ ಸಂಜೀವ ಪೂಜಾರಿ, ಜಯರಾಮ ಶೆಟ್ಟಿ, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಪೂಜಾರಿ, ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ಪ್ರಶಾಂತ ಪೂಜಾರಿ ಹಾಗೂ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.