ತಗ್ಗರ್ಸೆ ಕಂಬಳಗದ್ದೆಯಲ್ಲಿ ಸಾಂಪ್ರದಾಯಿಕ ನಾಟಿ ಕಾರ್ಯ

Call us

Call us

ಕುಂದಾಪ್ರ ಡಾಟ್ ಕಾಂ ವರದಿ.
ಬೈಂದೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಐತಿಹಾಸಿಕ ಕಂಬಳ ನಡೆಯುವ ತಗ್ಗರ್ಸೆ ಕಂಠದಮನೆ ಕುಟುಂಬಸ್ಥರ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು, ಗುರುವಾರ ನಾಟಿ ಕಾರ್ಯ ಪೂರ್ಣಗೊಂಡಿದೆ.

Click Here

Call us

Call us

ಕಂಠದಮನೆಯ ಕುಂಟುಂಬಿಕರಲ್ಲಿ ಹಿರಿಯವರಾದ ಟಿ. ನಾರಾಯಣ ಹೆಗ್ಡೆ ಅವರ ಮಾರ್ಗದರ್ಶನಲ್ಲಿ ನೂರಾರು ಮಂದಿ ಕೃಷಿ ಕಾರ್ಮಿಕರಿಂದ ವಾಡಿಕೆಯಂತೆ ಒಂದೇ ದಿನದಲ್ಲಿ ನಾಟಿ ಕಾರ್ಯ ಪೂರ್ಣಗೊಂಡಿದೆ. ಈ ಸಂದರ್ಭ ಜಿ.ಪಂ ಸದಸ್ಯ ತಗ್ಗರ್ಸೆ ಬಾಬು ಶೆಟ್ಟಿ, ಗ್ರಾ.ಪಂ ಸದಸ್ಯ ಬಾಲಕೃಷ್ಣ ಹೆಗ್ಡೆ, ಸುಭಾಶ್ಚಂದ್ರ ಶೆ್ಟ್ಟಿ, ಎಂಪಿಎಂಸಿ ಅಧ್ಯಕ್ಷ ವೆಂಕಟ ಪೂಜಾರಿ ಸಸಿಹಿತ್ಲು, ರಾಜು ಹುದಾರ್ ಮೊದಲಾದವರು ಇದ್ದರು.

Click here

Click Here

Call us

Visit Now

ಸಾಂಪ್ರದಾಯಿಕ ಕೃಷಿ ಕಾರ್ಯ:
ಕಂಠದಮನೆಯ ಎದುರೇ ಸುಮಾರು 5.14 ಎಕರೆ ವಿಸ್ತೀರ್ಣವಾದ ಕಂಬಳಗದ್ದೆಯಿದೆ. ಅಲ್ಲಿ ವೀರಗಲ್ಲು, ಶಾಸನಗಳು ಇದ್ದು, ದೇವರಗದ್ದೆ ಎಂಬ ನಂಬಿಕೆ ಸ್ಥಳೀಯರಲ್ಲಿದೆ. ಇಂದಿಗೂ ಕೂಡ ಇಲ್ಲಿ ಕೃಷಿಕಾಯಕವನ್ನು ಸಂಪ್ರದಾಯಬದ್ಧವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಮಳೆಗಾಲ ಆರಂಭವಾಗುತ್ತಿದ್ದಂತೆ ನಾಟಿ ಕಾರ್ಯಕ್ಕೆ ತಯಾರಿ ನಡೆಯುತ್ತದೆ. ಇಡಿ ಗದ್ದೆಯನ್ನು ಒಂದೇ ದಿನದಲ್ಲಿ ನಾಟಿ ಮಾಡಬೇಕು ಎಂಬ ವಾಡಿಕೆ ಇರುವುದರಿಂದ ಟ್ರಾಕ್ಟರ್ ಬಳಸಿ ಉಳುಮೆ ಮಾಡಲಾಗುತ್ತದೆ. ನೂರಾರು ಕೃಷಿ ಆಳುಗಳು ಒಂದೇ ದಿನದಲ್ಲಿ ಗದ್ದೆ ನಾಟಿ ಮಾಡಿ ಮುಗಿಸುತ್ತಾರೆ. ಈ ಕಾರ್ಯ ಶುದ್ಧಾಚಾರದಲ್ಲಿ ನಡೆಯುತ್ತದೆ. ಕುಂದಾಪ್ರ ಡಾಟ್ ಕಾಂ ವರದಿ.

ಕಟಾವು ಕಾರ್ಯವು ಅಷ್ಟೇ. ಒಂದೇ ದಿನದಲ್ಲಿ ಮುಗಿಯಬೇಕು ಎಂಬ ವಾಡಿಕೆಯಿದ್ದು ನಾಟಿ ಹಾಗೂ ಕಟಾವು ಕಾರ್ಯದಲ್ಲಿ ಊರಿನ ಇತರ ಕೃಷಿಕರು ಭಾಗವಹಿಸುತ್ತಾರೆ. ನಾಟಿ ಮುಗಿದ ಬಳಿಕ ಕಾರ್ತಿಕ ಮಾಸದ ವೃಶ್ಚಿಕ ಸಂಕ್ರಾಂತಿಯಂದು ಸಾಂಪ್ರದಾಯಿಕ ಕಂಬಳ ನಡೆಯುತ್ತದೆ /ಕುಂದಾಪ್ರ ಡಾಟ್ ಕಾಂ/

Call us

 

Leave a Reply

Your email address will not be published. Required fields are marked *

seventeen + 19 =