ವಿವಿಧೆಡೆ ಸುಲಿಗೆ, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ಬಂಧನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಿವಿಧೆಡೆ ಸುಲಿಗೆ ಹಾಗೂ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೈಂದೂರು ಸಿಪಿಐ ನೇತೃತ್ವದ ಅಪರಾದ ಪತ್ತೆ ದಳದ ತಂಡ ಬಂಧಿಸಿ, ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಪ್ರಸ್ತುತ ಮಹಾರಾಷ್ಟ್ರದಲ್ಲಿ ವಾಸವಿರುವ, ಮೂಲತಃ ಮೂಡ್ಲಕಟ್ಟೆ ನಿವಾಸಿ ವಿಜಯ್ (48) ಬಂಧಿತ ಆರೋಪಿ.

Call us

Call us

Call us

ಆರೋಪಿಯು ಬೈಂದೂರು ಹಾಗೂ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಕೃತ್ಯಕ್ಕೆ ಬಳಸಿದ ಬೈಕಿನ ಚಲನವಲನಗಳ ಮೇಲೆ ನಿಗಾಯಿಟ್ಟ ಪೊಲೀಸರು ಸಿಸಿ ಟಿ.ವಿ ಪೂಟೇಜ್ ಹಾಗೂ ಆಧುನಿಕ ತಂತ್ರಜ್ಞಾನದ ಆಧಾರದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ್ದ, ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದ ತಂಡವು ಮುಂಬೈ ಬಳಿಯ ಕೇಂದ್ರಾಡಳಿತ ಪ್ರದೇಶವಾದ ದಮನ್ ಎಂಬಲ್ಲಿ ಬಂಧಿಸಿತ್ತು.

ಈತನ ವಿರುದ್ಧ ಕೊಲ್ಲೂರು, ಕೋಟ ಠಾಣೆಯಲ್ಲಿ ಒಂದೊಂದು ಪ್ರಕರಣ, ಮುಂಬೈ ನವಾಗರ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ಹಾಗೂ ಮುಲುಂಡ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಯಿಂದ 24.4 ಗ್ರಾಂ ತೂಕದ ಒಂದು ಚಿನ್ನದ ಸರ, 38.6 ಗ್ರಾಂ ತೂಕದ ಕರಿಮಣಿ ಸರ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್, ಮೊಬೈಲ್ ಸಹಿತ 3,25,500 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ಮೇ 19ರ ತನಲ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದ ಇನ್ನೋರ್ವ ಆರೋಪಿ ಸತ್ಸಿಂಗ್ ವಿರಮ್ ಸಿಂಗ್ ಸಂದು ಅಲಿಯಾಸ್ ಬಬ್ಬು ಸರ್ದಾರ್ ಎಂಬಾತ ಮುಲುಂಡ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಉಡುಪಿ ಜಿಲ್ಲಾ ಎಸ್ಪಿ ಎನ್. ವಿಷ್ಣುವರ್ಧನ್ ಅವರ ಮಾರ್ಗದರ್ಶನದಲ್ಲಿ ಎಎಸ್ಪಿ ಎಸ್. ಟಿ. ಸಿದ್ದಲಿಂಗಪ್ಪ ಹಾಗೂ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಅವರ ಸೂಚನೆಯಂತೆ ಬೈಂದೂರು ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ, ತನಿಖಾ ಪಿಎಸ್ಐ ವಿನಯ ಎಂ. ಕೊರ್ಲಹಳ್ಳಿ ಅಪರಾಧ ವಿಭಾಗದ ಸಿಬಂದಿ ಮೋಹನ ಪೂಜಾರಿ, ಶ್ರೀಧರ, ಪ್ರಿನ್ಸ್ ಕೆ.ಜೆ., ರಿತೇಶ್, ಕೃಷ್ಣದೇವಾಡಿಗ, ಅಣ್ಣಪ್ಪ ಪೂಜಾರಿ, ಚಾಲಕ ಚಂದ್ರ ಪೂಜಾರಿ, ಕೋಟ ಠಾಣೆಯ ರಾಘವೇಂದ್ರ ಶೆಟ್ಟಿ, ಆರ್.ಡಿ. ಸೆಲ್ ವಿಭಾಗದ ಶಿವಾನಂದ, ದಿನೇಶ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

5 × 4 =