ಕುಂದಾಪುರ: ಕೋವಿಡ್ ಚಿಕಿತ್ಸೆಗೆ ಜಿಲ್ಲೆಯಲ್ಲಿ 960 ಅಕ್ಸಿಜನ್ ಬೆಡ್ ಮೀಸಲು – ಸಂಸದೆ ಶೋಭಾ ಕರಂದ್ಲಾಜೆ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಆಕ್ಸಿಜನ್ ಬೆಡ್ ಹಾಗೂ ಬೆಡ್‌ಗಳ ಸಮಸ್ಯೆ ಇಲ್ಲ, ಯಾರೂ ಆತಂಕಗೊಳ್ಳಬೇಕಾಗಿಲ್ಲ. ಜಿಲ್ಲೆಯಲ್ಲಿ 43 ಆಸ್ಪತ್ರೆಗಳನ್ನು ಕೊರೊನಾ ಚಿಕಿತ್ಸೆಗೆ ಗುರುತಿಸಲಾಗಿದೆ. 1924 ಬೆಡ್‌ಗಳಿದ್ದು, 960 ಅಕ್ಸಿಜನ್ ಬೆಡ್‌ಗಳಿವೆ. ಈಗ 245 ಬೆಡ್‌ಗಳು ಮಾತ್ರ ಭರ್ತಿಯಾಗಿದ್ದು, 736 ಅಕ್ಸಿಜನ್ ಬೆಡ್ ಖಾಲಿ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Call us

Click Here

Click here

Click Here

Call us

Visit Now

Click here

ಅವರು ಕುಂದಾಪುರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕೊರೊನಾ ನಿಯಂತ್ರಣದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಕುಂದಾಪುರದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ 89 ಮಂದಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ 145 ಮಂದಿ ಒಟ್ಟು 234 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ ಎನ್ನುವ ಸಾಕಷ್ಟು ದೂರುಗಳು ಬರುತ್ತಿದ್ದು ಖಾಸಗಿ ಆಸ್ಪತ್ರೆಗಳ ಮೇಲೆ ನಿಗಾ ವಹಿಸಲು ತಾಲೂಕು ಮಟ್ಟದ ಅಧಿಕಾರಿಯೋರ್ವರನ್ನು ನೋಡೆಲ್ ಅಧಿಕಾರಿಯಾಗಿ ನಿಯೋಜಿಸಲಾಗುವುದು. ನಾಳೆಯಿಂದಲೇ ತಾಲೂಕು ಮಟ್ಟದಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ ಓರ್ವ ಅಧಿಕಾರಿ ನೋಡೆಲ್ ಅಧಿಕಾರಿಯಾಗಿ ಕೊರೊನಾ ಮೀಸಲು ಬೆಡ್ಗಳ ಬಗ್ಗೆ ನಿಗಾ ವಹಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ ಎಂದರು.

► ಉಡುಪಿ ಜಿಲ್ಲೆಯಲ್ಲಿ ಬುಧವಾರ 1655 ಕೋವಿಡ್ ಪಾಸಿಟಿವ್, 3 ಮಂದಿ ಸಾವು – https://kundapraa.com/?p=47931 .

ಜಿಲ್ಲೆಯಲ್ಲಿ ರೆಮಿಡಿಸಿವಿರ್ ಕೊರತೆಯಾಗಿಲ್ಲ. ಅಂತ ಕೊರತೆ ಎದುರಾದರೂ ಪಕ್ಕದ ಜಿಲ್ಲೆಗಳಿಂದ ತರಿಸಿಕೊಳ್ಳಲಾಗುತ್ತಿದೆ. ರೆಮಿಡಿಸಿವಿರ್ ಅಗತ್ಯದಷ್ಟು ಪೂರೈಕೆ ಮಾಡಲಾಗುತ್ತಿದೆ. ಜಿಲ್ಲೆಯ ಅಲ್ಲಲ್ಲಿ ಕೊರೊನಾ ಕೇರ್ ಸೆಂಟರ್ ಮಾಡುವ ಬಗ್ಗೆಯೂ ತೀರ್ಮಾನ ತಗೆದುಕೊಳ್ಳಲಾಗುವುದು. ಹಾಸ್ಟೆಲ್ಗಳು ಮೂರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೊರೊನಾ ಕೇರ್ ಸೆಂಟರ್ಗಳಾಗಿ ಬಳಸಿಕೊಳ್ಳಲಾಗುವುದು. ಕುಂದಾಪುರದ ಹಳೆ ಆದರ್ಶ ಆಸ್ಪತ್ರೆಯನ್ನು ಕೊರೊನಾ ಸೆಂಟರ್ ಆಗಿ ಬಳಸಿಕೊಳ್ಳಲು ಸಿದ್ದತೆ ಮಾಡಲಾಗುತ್ತಿದೆ ಎಂದರು.

Call us

ವ್ಯಾಕ್ಸಿನ್ ಕೊರತೆ ಇದೆ. ಬೇಡಿಕೆಯಷ್ಟು ಸರಬರಾಜು ಆಗುತ್ತಿಲ್ಲ. ಉತ್ಪಾದನೆ ಕಡಿಮೆಯಾಗಿದೆ. ಕೋವಿಶಿಲ್ಡ್ ಅನ್ನು ಮೊದಲ ಡೋಸ್ ಪಡೆದವರಿಗೆ ಆದ್ಯತೆಯ ಮೇಲೆ ಎರಡನೇ ಡೋಸ್ ನೀಡಲಾಗುತ್ತಿದೆ ಎಂದರು.

► ಉಡುಪಿ ಜಿಲ್ಲೆಗೆ ಅಗತ್ಯವಿರುವ ಆಕ್ಸಿಜಿನ್, ರೆಮ್ಡಿಸಿವರ್ ಸರಬರಾಜು ಮಾಡಲು ಕ್ರಮ: ಸಚಿವ ಬೊಮ್ಮಾಯಿ – https://kundapraa.com/?p=47921 .

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ತಾ.ಪಂ ಅಧ್ಯಕ್ಷೆ ಇಂದಿರಾ ಶೆಟ್ಟಿ, ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಉಪಸ್ಥಿತರಿದ್ದರು.

ಕುಂದಾಪುರದಲ್ಲಿ ಅಕ್ಸಿಜನ್ ಘಟಕ: “ಕುಂದಾಪುರದಲ್ಲಿಯೂ ಆಕ್ಸಿಜನ್ ಘಟಕ ಸ್ಥಾಪನೆಗೆ ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶೀಘ್ರ ಇಲ್ಲಿಯೆ ಆಕ್ಸಿಜನ್ ಉತ್ಪಾದನೆ ಮಾಡುವ ಪ್ರಕ್ರಿಯೆಯೂ ಆರಂಭವಾಗಲಿದೆ. ಜಿಲ್ಲೆಯಲ್ಲಿ ದೊಡ್ಡದಾದ ಆಕ್ಸಿಜನ್ ಉತ್ಪಾದನಾ ಘಟಕ ನಿರ್ಮಾಣದ ಬಗ್ಗೆಗೂ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ” ಎಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂಸದರು ತಿಳಿಸಿದರು.

► ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಲಭ್ಯತೆ ಕುರಿತು ಇಲ್ಲಿದೆ ಮಾಹಿತಿ – https://kundapraa.com/?p=47896 .

Leave a Reply

Your email address will not be published. Required fields are marked *

one × 3 =