ಗಾಯಗೊಂಡಿದ್ದ ಮಾಸ್ಕಡ್ ಬೂಬಿ ಪಕ್ಷಿಗೆ ಚಿಕಿತ್ಸೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇಲ್ಲಿನ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಅಟ್ಲಾಂಟಿಕ್ ಮತ್ತು ಪೆಸಿಫಿಕ್ ಮಹಾಸಾಗರದಲ್ಲಿರುವ ಮಾಸ್ಕಡ್ ಬೂಬಿ ಎಂಬ ವಿಶೇಷ ಪಕ್ಷಿಯು ಗಾಯಗೊಂಡಿರುವ ರೀತಿಯಲ್ಲಿ ಕಂಡು ಬಂದಿದ್ದು, ಅರಣ್ಯ ಇಲಾಖೆಯವರು ಹಾಗೂ ಗ್ರಾಮಸ್ಥರು ಚಿಕಿತ್ಸೆ ನೀಡಿ ಸುರಕ್ಷಿತವಾಗಿ ಸಮುದ್ರಕ್ಕೆ ಬಿಡುವ ಕಾರ್ಯ ನಡೆದಿದೆ.

ಈ ಸಂದರ್ಭ ಬೈಂದೂರು ಉಪ ವಲಯ ಅರಣ್ಯ ಅಧಿಕಾರಿಗಳಾದ ರವಿರಾಜ್. ಬಿ., ಗುರುರಾಜ .ಬಿ., ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಊರ ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *

eleven − two =