ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಯು.ಬಿ. ಶೆಟ್ಟಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ಉಪ್ಪುಂದ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲ್ ವತಿಯಿಂದ 10 ಬ್ಯಾರಿಕೇಡ್’ಗಳನ್ನು ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಬೈಂದೂರು ಪಿಎಸ್ಐ ಪವನ್ ನಾಯಕ್, ಯುಬಿಎಸ್ ಶಿಕ್ಷಣ ಸಂಸ್ಥೆಗಳ ಸಂಯೋಜಕ ಸುಬ್ರಹ್ಮಣ್ಯ ಜೋಶಿ, ಉಪ್ಪುಂದ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮುಖ್ಯೋಪಧ್ಯಾಯ ಸಂದೇಶ್ ಶೆಟ್ಟಿ, ಸುಬ್ರಹ್ಮಣ್ಯ ಬಾಡ, ಸುಕುಮಾರ್ ಶೆಟ್ಟಿ ಸೂರ್ಕುಂದ, ಹೆನ್ಸಿ ಲೋಬೋ ಮೊದಲಾದವರು ಉಪಸ್ಥಿತರಿದ್ದರು.