ಅಂಗಡಿ, ಹೋಟೆಲ್ ಸಿಬ್ಬಂದಿಗಳು ಕೋವಿಡ್ -19 ತಪಾಸಣೆ ಮಾಡಿಸಿಕೊಳ್ಳಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಆ.3: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆ ಯಾಗುತ್ತಿದ್ದು ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಅಂಗಡಿ ಮುಂಗಟ್ಟುಗಳು, ಝೊಮ್ಯಾಟೋ, ಸ್ವಿಗ್ಗಿಯಂತಹ ಆಹಾರ ವಿತರಕ ಸಂಸ್ಥೆಗಳು, ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳ ಮಾಲಕರು ಹಾಗೂ ಸಂಸ್ಥೆಯ ಸಿಬ್ಬಂದಿಗಳಿಗೆ ಕೊವಿಡ್ ತಪಾಸಣೆ ಮಾಡಿಸುವಂತೆ ಆದೇಶ ನೀಡಲಾಗಿತ್ತು.

ಆದರೆ ಕೆಲವು ಸಂಸ್ಥೆಗಳನ್ನು ಹೊರತುಪಡಿಸಿ ಹೆಚ್ಚಿನ ಸಂಸ್ಥೆಯವರು ತಮ್ಮ ಸಿಬ್ಬಂದಿಯವರಿಗೆ ಕೋವಿಡ್ ಪರೀಕ್ಷೆ ಮಾಡಿಸದೇ ಇರುವುದು ಕಂಡುಬಂದಿರುತ್ತದೆ. ಆದ್ದರಿಂದ ಜಿಲ್ಲೆಯಲ್ಲಿರುವ ಎಲ್ಲಾ ಮಾಲ್‌ಗಳು, ಶಾಪಿಂಗ್ ಕಾಂಪ್ಲೆಕ್ಸ್‌ಗಳು, ಅಂಗಡಿ ಮುಂಗಟ್ಟುಗಳು, ಝೊಮ್ಯಾಟೋ, ಸ್ವಿಗ್ಗಿಯಂತಹ ಆಹಾರ ವಿತರಕ ಸಂಸ್ಥೆಗಳು, ಹೊಟೇಲ್ ಮತ್ತು ರೆಸ್ಟೋರೆಂಟ್‌ಗಳವರು ಕಡ್ಡಾಯವಾಗಿ ತಮ್ಮ ವ್ಯಾಪ್ತಿಗೆ ಸೇರಿದ ತಾಲೂಕು ಆರೋಗ್ಯಾಧಿಕಾರಿಯವರನ್ನು ಸಂಪರ್ಕಿಸಿ ದಿನಾಂಕವನ್ನು ನಿಗದಿಪಡಿಸಿಕೊಂಡು ರ‍್ಯಾಪಿಟ್ ಆಂಟಿಜೆನ್ ಟೆಸ್ಟ್ ಮೂಲಕ ತಮ್ಮ ಸಂಸ್ಥೆಯ ಎಲ್ಲಾ ಸಿಬ್ಬಂದಿಯವರಿಗೆ ತಪಾಸಣೆ ಮಾಡಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ, ಅಂತಹ ಸಂಸ್ಥೆಯವರನ್ನು ಅಪರಾಧಿ ಎಂದು ಪರಿಗಣಿಸಿ, ಕಾಯ್ದೆಯನ್ವಯ ಕಠಿಣ ಶಿಕ್ಷೆಗೆ ಗುರಿಪಡಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.

ದೂರವಾಣಿ ಸಂಖ್ಯೆ:

  • ತಾಲೂಕು ಆರೋಗ್ಯಾಧಿಕಾರಿ ಕುಂದಾಪುರ: 08254-230730
  • ತಾಲೂಕು ಆರೋಗ್ಯಾಧಿಕಾರಿ ಉಡುಪಿ: 0820-2526428
  • ತಾಲೂಕು ಆರೋಗ್ಯಾಧಿಕಾರಿ ಕಾರ್ಕಳ: 08258-231788

► ಪಂಜರ ಮೀನು ಕೃಷಿ ಮಾಡುವ ಆಸಕ್ತರಿಗೆ ತರಬೇತಿ ಕಾರ್ಯಾಗಾರ – https://kundapraa.com/?p=40026 .

Leave a Reply

Your email address will not be published. Required fields are marked *

eleven − 7 =