ಸುಭದ್ರ ರಾಷ್ಟ್ರ, ಜಾತ್ಯಾತೀತ ಸಮಾಜ ನಿರ್ಮಾಣ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ: ಸಲೀಂ ಅಹಮ್ಮದ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸುಭದ್ರ ರಾಷ್ಟ್ರ ಹಾಗೂ ಜಾತ್ಯಾತೀತ ಸಮಾಜ ನಿರ್ಮಾಣ ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. 143 ವರ್ಷಗಳ ಹಿನ್ನೆಲೆ ಹೊಂದಿರುವ ಪಕ್ಷಕ್ಕೆ ತ್ಯಾಗ, ಹೋರಾಟ, ಬಲಿದಾನಗಳ ಇತಿಹಾಸವಿದೆ. ಅಧಿಕಾರ ಇರಲಿ ಅಥವಾ ಇಲ್ಲದಿರಲಿ ಪಕ್ಷವು ಜನರ ಹಿತಕಾಯುತ್ತಲೇ ಬಂದಿದೆ. ಮುಂದೆಯೂ ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹೇಳಿದರು.

ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಸಹಯೋಗದೊಂದಿಗೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಹೇರೂರು ಗ್ರಾಮೀಣ ಸಮಿತಿ ಜಂಟಿ ಆಶ್ರಯದಲ್ಲಿ ಸೋಮವಾರ ಮೆಕೋಡು ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆದ ‘ಗ್ರಾಮದಲ್ಲೊಂದು ದಿನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೊರೊನಾ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಪಕ್ಷ ರಾಜ್ಯ ಸರಕಾರಕ್ಕೆ ಸಂಪೂರ್ಣ ಸಹಕಾರ, ಬೆಂಬಲ ನೀಡಿತ್ತು. ಆದರೆ ಮಾಸ್ಕ್, ಸೈನಿಟೈಸರ್, ವೆಂಟಿಲೇಟರ್ ಖರೀದಿಯಲ್ಲಿ ಸರಕಾರ ಭ್ರಷ್ಟಾಚಾರ ಮಾಡಿ ಇಂದು ಲೆಕ್ಕ ಕೊಡುವ ಬದಲಿಗೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ರಾಜ್ಯ ಸರಕಾರದ ವೈಪಲ್ಯವನ್ನು ಕಾಂಗ್ರೆಸ್ ಪಕ್ಷ ಕಟುವಾಗಿ ಕಂಡಿಸುತ್ತದೆ. ಕಾಂಗ್ರೆಸ್ ಪಕ್ಷ ಜನರ ರಕ್ಷಣೆಗಾಗಿ ಆರೋಗ್ಯ ಅಭಯಹಸ್ತ ಯೋಜನೆ ರೂಪಿಸಿದ್ದು ಜನರ ವಿಶ್ವಾಸಕ್ಕೆ ಪಾತ್ರವಾಗಿದೆ. ಭ್ರಷ್ಟ ಸರಕಾರದ ವಿರುದ್ಧ ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಪ್ರಬಲ ಹೋರಾಟ ನಡೆಸಲಿದೆ.

ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ ಕೆಲವೆ ದಿನಗಳಲ್ಲಿ ಗ್ರಾ. ಪಂ. ಚುನಾವಣೆ ಘೋಷಣೆಯಾಗಲಿದೆ. ಬಂದೂರು ಕ್ಷೇತ್ರದಲ್ಲಿ ಯಾವುದೇ ಒಳ ಒಪ್ಪಂದಗಳಿಲ್ಲದೆ ಪ್ರತಿ ವಾರ್ಡ್‌ಗಳಿಗೆ ಪ್ರತಿನಿಧಿಗಳನ್ನು ಕಣಕ್ಕಿಳಿಸಲು ಕಾರ್ಯಕರ್ತರು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ಮಾತನಾಡಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಸಂಘಟಿಸಲು ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕರ್ತರ ನಡುವೆ ಭಾವನಾತ್ಮಕ ಬಂದ ಏರ್ಪಡಲಿದೆ. ಇದು ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎಂದರು.

ಈ ಸಂದರ್ಭ ವಿಧಾನ ಪರಿಷತ್ ಮುಖ್ಯ ಸಚೇತಕ ನಾರಾಯಣ ಸ್ವಾಮಿ, ರಾಜ್ಯ ಕಾರ್ಯದರ್ಶಿ ತಾರಾನಾಥ ಶೆಟ್ಟಿ, ಎಂ.ವಿ.ಗಪೂರ್, ಜಿ.ಪಂ. ಸದಸ್ಯರಾದ ಗೌರಿ ದೇವಾಡಿಗ, ಜ್ಯೋತಿ ನಾಯ್ಕ್, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ, ಕುಂದಾಪುರ ಬ್ಲಾಕ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಕಾರ್ಯಾಧ್ಯಕ್ಷ ಪ್ರಶಾಂತ ಪೂಜಾರಿ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್, ಹೇರೂರು ಗ್ರಾ. ಪಂ. ಮಾಜಿ ಅಧ್ಯಕ್ಷ ಸತೀಶ ಕುಮಾರ್ ಶೆಟ್ಟಿ, ಬಂದೂರು ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ರಾಜೇಶ್ ದೇವಾಡಿಗ, ಬೆಂಗಳೂರು ಬಾಲರಾಜ್, ಶಶಿಧರ ಶೆಟ್ಟಿ, ಎಸ್.ಸಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್ ಮೊದಲಾದವರು ಇದ್ದರು.

ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿ. ಪಂ. ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ವಂದಿಸಿದರು. ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ವಿವಿಧ ಬೂತ್‌ಗಳ ಕಾಂಗ್ರೆಸ್ ಕಾರ್ಯಕರ್ತರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

12 + thirteen =