ಉಡುಪಿ ಜಿಲ್ಲೆ: ಅಶಕ್ತ ಕಲಾವಿದರಿಗೆ ಕನ್ನಡ & ಸಂಸ್ಕೃತಿ ಇಲಾಖೆಯಿಂದ ಆರ್ಥಿಕ ಸಹಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸ್ತುತ ಕೋವಿಡ್-19 ರೋಗಾಣುವಿನಿಂದ ಇಡೀ ರಾಜ್ಯ ಲಾಕ್ ಡೌನ್ ಆಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕ ಸಹಾಯ ಮಾಡಲು ನಿರ್ಧರಿಸಲಾಗಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು/ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ನಿರತರಾಗಿದ್ದು ಕನಿಷ್ಠ 10 ವರ್ಷ ಕಲಾಸೇವೆ ಮಾಡಿರಬೇಕು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರಬಾರದು ಮತ್ತು ಯಾವುದೇ ಸರಕಾರಿ ನೌಕರರರಾಗಿರಬಾರದು (ರಾಜ್ಯ/ಕೇಂದ್ರ/ನಿಗಮ/ಮಂಡಳಿ/ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಅರೆ ಸರ್ಕಾರಿ ಸಂಸ್ಥೆಗಳು.)

ಕಲಾವಿದರು /ಸಾಹಿತಿಗಳು ತಮ್ಮ ಹೆಸರು, ವಿಳಾಸ, ಕಲಾ ಪ್ರಕಾರ, ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ವಿವರಗಳನ್ನೊಳಗೊಂಡ ಅರ್ಜಿಯನ್ನು ಬಿಳಿ ಹಾಳೆಯ ಮೇಲೆ ಸ್ವ ವಿವರಗಳೊಂದಿಗೆ, ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಗತಿ ನಗರ,  ಅಲೆವೂರು ಗ್ರಾಮ, ಉಡುಪಿ, ಈ ಮೇಲ್ [email protected] ಅಥವಾ ಮೊ.ಸಂ. 9945731062 ಗೆ ವಾಟ್ಸಾಪ್ ಮೂಲಕ ಏಪ್ರಿಲ್ 27 ರ ಒಳಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

19 + nine =