ಬೆಂಗಳೂರಿನಿಂದ ಬಂದರೆ ಹೋಮ್ ಕ್ವಾರಂಟೈನ್‌ನಲ್ಲಿರಿ: ಉಡುಪಿ ಜಿಲ್ಲಾಡಳಿತ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರಿನಲ್ಲಿ ಒಂದು ವಾರ ಲಾಕ್‌ಡೌನ್ ಜಾರಿಯಾಗುವ ಹಿನ್ನೆಲೆಯಲ್ಲಿ, ಅಲ್ಲಿಂದ ಹೆಚ್ಚಿನ ಸಂಖ್ಯೆಯಲ್ಲಿ ಜಿಲ್ಲೆಗೆ ಆಗಮಿಸುವ ಜನರು ಸ್ವಯಂ ಪ್ರೇರಿತರಾಗಿ ಹೋಂ ಕ್ವಾರಂಟೈನ್ ಆಗುವಂತೆ ಉಡುಪಿ ಜಿಲ್ಲಾಡಳಿತ ಮನವಿ ಮಾಡಿದೆ.

ಕುಂದಾಪುರದಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರೂ ರೋಗಲಕ್ಷಣ ಇರುವ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಅಗತ್ಯ ಬಿದ್ದರೆ ಹಾಸ್ಟೆಲ್ ಗಳನ್ನೂ ಕೋವಿಡ್ ಕೇರ್ ಸೆಂಟರ್ ಗಳಾಗಿ ಪರಿವರ್ತನೆ ಮಾಡಿಕೊಳ್ಳುವ ಚಿಂತನೆಯಿದೆ. ಕೊಲ್ಲೂರು ಲಲಿತಾಂಬಿಕಾ ಗೆಸ್ಟ್ ಹೌಸ್ ಕೋವಿಡ್ ಆಸ್ಪತ್ರೆಯಾಗಿ ಪುನಾರಂಭ ಮಾಡಲಿದ್ದೇವೆ ಎಂದರು.

ಅಂಗನವಾಡಿ ಕಾರ್ಯಕರ್ತರ ಮೂಲಕ ಮನೆ ಮನೆ ಸರ್ವೇ ಮಾಡಲಾಗುವುದು. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಿಂದ ಬಂದ ಜನರ ಸಾರಿ, ಐಎಲ್ ಐ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯಲಾಗುವುದು. ಹೋಮ್ ಐಸೋಲೇಶನ್ ಬಗ್ಗೆಯೂ ಚಿಂತನೆಯಿದ್ದು, ಸೋಂಕು ಲಕ್ಷಣ ಇರದ ರೋಗಿಗಳ ಮನೆಯಲ್ಲಿ ಸೂಕ್ತ ವ್ಯವಸ್ಥೆ ಇದ್ದರೆ ಹೋಮ್ ಐಸೋಲೇಶನ್ ಮಾಡುವ ಕುರಿತು ಯೋಚಿಸುತ್ತಿದ್ದೇವೆ ಎಂದರು.

ಇದನ್ನೂ ಓದಿ:
► ಉಡುಪಿ: ಕೋವಿಡ್ ಸೋಂಕಿತ 70 ವರ್ಷದ ವೃದ್ಧ ಸಾವು – https://kundapraa.com/?p=39444.

Leave a Reply

Your email address will not be published. Required fields are marked *

4 × three =