ಉಡುಪಿ ಜಿಲ್ಲೆಗೆ ರಿಲೀಫ್: ಲಾಕ್ಡೌನ್ ಸಡಿಲಿಕೆಗೆ ರಾಜ್ಯ ಸರಕಾರ ಆದೇಶ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೋವಿಡ್ ಪಾಸಿಟಿವ್ ಪ್ರಕರಣಗಳು ಇಳಿಮುಖವಾಗುತ್ತಿರುವ ಉಡುಪಿ ಜಿಲ್ಲೆ ಸಹಿತ 6 ಜಿಲ್ಲೆಗಳಿಗೆ ಲಾಕ್ಡೌನ್ ಸಡಿಲಿಕೆ ಮಾರ್ಗಸೂಚಿ ಪರಿಷ್ಕರಿಸಿ ಸರಕಾರ ಆದೇಶ ಹೊರಡಿಸಿದೆ. ಕೆಟಗರಿ 1ರ ಜಿಲ್ಲೆಗಳಿಗೆ ನೀಡಲಾಗಿರುವ ಕೋವಿಡ್ ಮಾರ್ಗಸೂಚಿಯ ವಿನಾಯತಿಗಳು ಈ ಜಿಲ್ಲೆಗಳಿಗೆ ಅನ್ವಯವಾಗಲಿದ್ದು, ಸಂಜೆ 5 ಗಂಟೆಯ ತನಕ ಅನುಮತಿಸಲಾಗಿರುವ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಲಾಗಿದೆ.

Call us

Click Here

Click here

Click Here

Call us

Visit Now

Click here

ಕೆಟಗರಿ 1ರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳು ಅನ್ವಯವಾಗಿದೆ.
• ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.
• ಎಸಿ. ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.
• ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
• ಬಸ್ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
• ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
• ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
• ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
• ಜಿಮ್ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ರಾಜ್ಯವ್ಯಾಪಿ ಅನ್ವಯವಾಗುವಂತೆ:
• ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
• ಬಸ್ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.

ಉಡುಪಿ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ ಹಾಗೂ ವಿಜಯಪುರ ಜಿಲ್ಲೆಗಳಿಗೆ ಈ ನಿಯಮ ಅನ್ವಯವಾಗಿದೆ.

Call us

Leave a Reply

Your email address will not be published. Required fields are marked *

thirteen + two =