ದ್ವಿತೀಯ ಪಿಯು ಫಲಿತಾಂಶ: ಉಡುಪಿ –ದ.ಕ ಜಿಲ್ಲೆ ರಾಜ್ಯಕ್ಕೇ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ/ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ  ಪ್ರಥಮ ಸ್ಥಾನ ಪಡೆದುಕೊಂಡಿದೆ.

ಉಡುಪಿ ಜಿಲ್ಲೆ – ದಕ್ಷಿಣ ಕನ್ನಡ ಶೇ. 90.71  ಫಲಿತಾಂಶದೊಂದಿದೆ ಪ್ರಥಮ ಸ್ಥಾನವನ್ನು ಹಂಚಿಕೊಂಡಿದ್ದು, ಮೂರನೇ ಸ್ಥಾನದಲ್ಲಿರುವ ಕೊಡಗು ಜಿಲ್ಲೆಯಲ್ಲಿ 81.53% ಉತ್ತರ ಕನ್ನಡ ಜಿಲ್ಲೆಯಲ್ಲಿ 80;97 % ಪಡೆದು ನಾಲ್ಕನೇ ಸ್ಥಾನದಲ್ಲಿದ್ದರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 79.11 % ಫಲಿತಾಂಶ ದಾಖಲಿಸುವ ಮೂಲಕ ಐದನೇ ಸ್ಥಾನವನ್ನು ಪಡೆದುಕೊಂಡಿದೆ. ಕೊನೆಯ ಸ್ಥಾನದಲ್ಲಿರುವ ವಿಜಯಪುರದಲ್ಲಿ 54.22% ಫಲಿತಾಂಶ ದಾಖಲಾಗಿದೆ.

ಒಟ್ಟು 6,75,277 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ಹೊಸಬರು 5,56267 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 3,84,947 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪುನಾರಾವರ್ತಿತ 91,025 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 25,602 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಶೇ. 76.02 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ,65.52 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾವಿಭಾಗದಲ್ಲಿ ಶೇ. 41.27 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 92 ಕಾಲೇಜುಗಳು ಶೇ.100ರಷ್ಟು ಫಲಿತಾಂಶವನ್ನು ದಾಖಲಿಸಿವೆ. ಈ ಪೈಕಿ 3 ಸರಕಾರಿ, 1 ಅನುದಾನಿತ ಹಾಗೂ 78 ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಶೇ.100 ಫಲಿತಾಂಶ ಪಡೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇನ್ನು ರಾಜ್ಯದಲ್ಲಿ 5 ಸರಕಾರಿ ಪದವಿ ಪೂರ್ವ ಕಾಲೇಜು, 1 ಅನುದಾನಿತ ಪದವಿ ಪೂರ್ವ ಕಾಲೇಜು ಹಾಗೂ 78 ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳು ಶೂನ್ಯ ಫಲಿತಾಂಶವನ್ನು ದಾಖಲಿಸಿವೆ

Leave a Reply

Your email address will not be published. Required fields are marked *

twelve + five =