ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಗರಿಷ್ಠ ಪ್ರಕರಣ ದಾಖಲಾಗಿದೆ. ಜೂ.2ರ ಉಡುಪಿ ಡಿಎಚ್‌ಓ ನೀಡುವರು ಮಾಹಿತಿಯ ಪ್ರಕಾರ ಒಟ್ಟು 150 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.
ಜಿಲ್ಲೆಯಲ್ಲಿ ಸದ್ಯ ಒಟ್ಟು 410 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 64 ಮಂದಿ ಬಿಡುಗಡೆಯಾಗಿದ್ದು, 345 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಕುಂದಾಪುರ ಸರಕಾರಿ ಆಸ್ಪತ್ರೆ ಕೋಟಕ್ಕೆ ಸ್ಥಳಾಂತರ:
ಕುಂದಾಪುರ ಹಾಗೂ ಬೈಂದೂರು ಭಾಗದಲ್ಲಿ ಕೋವಿಡ್ ಪಾಸಿಟಿವ್ ಹೆಚ್ಚುತ್ತಿರುವುದರಿಂದ ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗುತ್ತಿದೆ. ಈಗಿರುವ ಕುಂದಾಪುರ ತಾಲೂಕು ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಕೋಟ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ. ಹಳೆಯ ವಿನಯ ಆಸ್ಪತ್ರೆಯಲ್ಲಿ ಒಪಿಡಿಯನ್ನು ಆರಂಬಿಸಲಾಗುತ್ತದೆ. ಗರ್ಭಿಣಿಯರು ಹಾಗೂ ಬಾಣಂತಿರಯನ್ನು ಕೋಟ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ.
ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 400 ಬೆಡ್ ಆಸ್ಪತ್ರೆಯನ್ನು ಮಾಡಲು ಯೋಜಿಸಲಾಗಿದೆ. ಕುಂದಾಪುರದಲ್ಲಿ ಈಗಾಗಲೇ 120 ಬೆಡ್ ಕೋವಿಡ್ ಆಸ್ಪತ್ರೆಯಿದ್ದು, ಆದರ್ಶ ಆಸ್ಪತ್ರೆಯಲ್ಲಿ 65 ಬೆಡ್ ಇದೆ. ಬೈಂದೂರು ತಾಲೂಕಿನಲ್ಲಿಯೂ ಹೆಚ್ಚಿನ ಪ್ರಕರಣ ವರದಿಯಾಗುತ್ತಿರುವುದರಿಂದ ಕೊಲ್ಲೂರು ಲಲಿತಾಂಬಿಕಾ ಗೆಸ್ಟ್ ಹೌಸನ್ನು ಕೋವಿಡ್ ಆಸ್ಪತ್ರೆಯಾಗಿ ಮಾಡಲಾಗುತ್ತಿದೆ. ಕೋರೋನಾ ಲಕ್ಷಣಗಳನ್ನು ಇಲ್ಲದೇ ಪಾಸಿಟಿವ್ ಬರುವವರನ್ನು ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೆ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಸರಕಾರಿ ಕ್ವಾರಂಟೈನ್ ಮುಗಿಸಿ ಹೋಂ ಕ್ವಾರಂಟೈನಿನಲ್ಲಿ ಇರುವವರಿಗೆ ಪಾಸಿಟಿವ್ ಬರುವ ಪ್ರಕರಣ ಹೆಚ್ಚುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಕೋವಿಡ್ ಪಾಸಿಟಿವ್ ವ್ಯಕ್ತಿ ವಾಸವಿರುವ ಮನೆಯ ಸುತ್ತಲಿನ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್ ಮಾಡುವುದು, ಆ ಭಾಗದಲ್ಲಿ ಜನಸಂಚಾರಕ್ಕೆ ನಿರ್ಬಂಧ ವಿಧಿಸುತ್ತಿರುವುದರಿಂದ ಲಾಕ್ ಡೌನ್ ಸಂಕಷ್ಟ ಮುಗಿಯಿತು ಅಂದುಕೊಳ್ಳುತ್ತಿದ್ದವರಿಗೆ ಹೊಸ ಸಂಕಷ್ಟ ಎದುರಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಜಿಲ್ಲೆಯಲ್ಲಿ ಇನ್ನೂ ಕೂಡ 5,846ಕ್ಕೂ ಅಧಿಕ ಕೋವಿಡ್-19 ವರದಿಗಳು ಬರುವುದು ಬಾಕಿ ಇದೆ. ಈ ನಡುವೆ ಮಹಾರಾಷ್ಟ್ರದಿಂದ ಬರುವವರ ಕ್ವಾರಂಟೈನ್ ಅವಧಿಯನ್ನು ಹೆಚ್ಚಿಸುವ ಬಗ್ಗೆ ಸಚಿವರ ಮಾತನಾಡಿದ್ದು, ಮುಂದಿನ ದಿನಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಸರಕಾರ ಏನು ಕ್ರಮ ಕೈಗೊಳ್ಳಲಿದೆ ಎಂದು ಕಾದು ನೋಡಬೇಕಿದೆ/ಕುಂದಾಪ್ರ ಡಾಟ್ ಕಾಂ ಸುದ್ದಿ/
ಇದನ್ನೂ ಓದಿ:
► ಕುಂದಾಪುರ ತಾಲೂಕು ಆಸ್ಪತ್ರೆ ಪೂರ್ಣ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ. ಸೇವೆಗಳು ಕೋಟಕ್ಕೆ ಶಿಫ್ಟ್: ಡಿಸಿ – https://kundapraa.com/?p=38175 .
► ಹೆಚ್ಚುತ್ತಿರುವ ಕೊರೋನಾ ಸೋಂಕು, ಆತಂಕ. ಜಿಲ್ಲಾಡಳಿತದ ಕೈಮೀರುತ್ತಿದೆಯೇ ಕೊರೋನಾ ನಿಯಂತ್ರಣ? – https://kundapraa.com/?p=38142 .