ಕುಂದಾಪುರ: ಅನಗತ್ಯ ಸಂಚಾರಕ್ಕೆ ಬ್ರೇಕ್. ಸಕಾರಣವಿಲ್ಲದವರ ವಾಹನ ಸೀಜ್

Call us

ಕುಂದಾಪ್ರ ಡಾಟ್ ಕಾಂ‌ ಸುದ್ದಿ.
ಕುಂದಾಪುರ: ಜಿಲ್ಲೆಯಲ್ಲಿ ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕಿದೆ.

Call us

ಕುಂದಾಪುರದಲ್ಲಿಯೂ ಉಪವಿಭಾಗಾಧಿಕಾರಿ ರಾಜು ಕೆ, ಡಿವೈಎಸ್ಪಿ ಶ್ರೀಕಾಂತ್ ಅವರ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸಲಾಗಿದ್ದು ಸಕಾರಣವಿಲ್ಲದೇ ಬೇರೆ ಗ್ರಾಮಗಳಿಂದ ನಗರಕ್ಕೆ ಬಂದವರ ಬೈಕ್, ಕಾರುಗಳನ್ನು ಜಪ್ತಿ ಮಾಡಲಾಗಿದೆ.

Call us

ಮಂಗಳವಾರ ಪ್ರಧಾನಿ ಜೊತೆಗೆ ಜಿಲ್ಲಾಧಿಕಾರಿಗಳ ಸಭೆ ನಡೆದ ಬಳಿಕ ಉಡುಪಿ ಜಿಲ್ಲಾಧಿಕಾರಿಗಳು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿ ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕುವಂತೆ ತಿಳಿಸಿದ್ದರು. ಅದರಂತೆ ಪೊಲೀಸರು ಪ್ರಕಟಣೆ ಹೊರಡಿಸಿದ್ದು ಅಗತ್ಯ ವಸ್ತುಗಳನ್ನು ಸಮೀಪದ ಅಂಗಡಿಗಳಲ್ಲೇ ಖರೀದಿಸಬೇಕು. ತೀರಾ ಅವಶ್ಯಕತೆ ಇದ್ದರಷ್ಟೇ ಪೇಟೆಗೆ ಬರಬಹುದು. ಅನಗತ್ಯ ಸಂಚಾರ ಕಂಡುಬಂದರೆ ವಾಹನ ಸೀಜ್ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದರು.

ಜಿಲ್ಲಾ ಕೇಂದ್ರದಲ್ಲಿ ಸ್ವತಃ ಡಿಸಿ ಜಿ. ಜಗದೀಶ್ ಅವರೇ ಕಾರ್ಯಾಚರಣೆಗೆ ಇಳಿದರು. ಕುಂದಾಪುರದಲ್ಲಿಯೂ ಉಪವಿಭಾಗಾಧಿಕಾರಿ ರಾಜು ಕೆ, ಡಿವೈಎಸ್ಪಿ ಶ್ರೀಕಾಂತ್ ಅವರ ನೇತೃತ್ವದಲ್ಲಿ ಪಿಎಸ್ಐಗಳಾದ ಸುಬ್ಬಣ್ಣ, ಸದಾಶಿವ ಗವರೊಜಿ ಅವರು ವಾಹನ ತಪಾಸಣೆ ನಡೆಸಿದರೆ, ಬೈಂದೂರಿನಲ್ಲಿ ತಹಶಿಲ್ದಾರ್ ಶೋಭಾಲಕ್ಷ್ಮೀ, ಬೈಂದೂರು ಪಪಂ ಮುಖ್ಯಾಧಿಕಾರಿ ನವೀನ್ ಅವರ ನೇತೃತ್ವದಲ್ಲಿ, ಸಿಪಿಐ ಸಂತೋಷ್ ಕಾಯ್ಕಿಣಿ, ಪಿಎಸ್ಐ ಸಂಗೀತಾ ಅವರು ವಾಹನಗಳ ತಪಾಸಣೆ ನಡೆಸಿದ್ದು, ಅನಗತ್ಯವಾಗಿ ಸಂಚಾರ ಮಾಡುತ್ತಿದ್ದವರ ಬೈಕ್ ಗಳನ್ನು ಕಾರುಗಳನ್ನು ಸೀಜ್ ಮಾಡಲಾಗಿದೆ. ಅನಗತ್ಯ ಜನಸಂಚಾರಕ್ಕೂ ಬ್ರೇಕ್ ಹಾಕಲಾಯಿತು.

 

ಇದನ್ನೂ ಓದಿ:
► ಮನೆ ಸಮೀಪದ ಅಂಗಡಿಗಳಲ್ಲೇ ಅಗತ್ಯ ವಸ್ತು ಖರೀದಿಸಿ, ಇಲ್ಲವೇ ಕ್ರಮ ಎದುರಿಸಿ: ಉಡುಪಿ ಡಿಸಿ ವಾರ್ನಿಂಗ್ – https://kundapraa.com/?p=48396 .

Leave a Reply

Your email address will not be published. Required fields are marked *

one × one =