ಉಪ್ಪುಂದದ ಕೊಡಿಹಬ್ಬ: ಶ್ರೀ ದುರ್ಗಾಪರಮೇಶ್ವರಿ ದೇವಳದ ಮನ್ಮಹಾರಥೋತ್ಸವ ಸಂಪನ್ನ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ – ಉಪ್ಪುಂದದ ಕೊಡಿಹಬ್ಬ ಶುಕ್ರವಾರ ಸಂಭ್ರಮ, ಸಡಗರದಿಂದ ಜರುಗಿತು.

Call us

Call us

Click Here

Visit Now

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು.

Click here

Click Here

Call us

Call us

ರಥೋತ್ಸವ ದಿನ ದೇವಳ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಚಂಡ ಮದ್ದಳೆಗಳ ನಾದ, ನಾಸಿಕ್ ಬ್ಯಾಂಡ್, ಕೀಲು ಕುದುರೆ, ತಟ್ಟಿರಾಯ ರಥೋತ್ಸವದ ಮೆರಗು ಹೆಚ್ಚಿಸಿದ್ದವು. ರಥಬೀದಿಯಲ್ಲಿ ವ್ಯಾಪಾರ ಜೋರಾಗಿಯೇ ನಡೆಯುತ್ತಿದೆ. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ.

ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಉದ್ಯಮಿ ಯು.ಬಿ ಶೆಟ್ಟಿ, ಬೈಂದೂರು ತಹಶೀಲ್ದಾರ್ ಶ್ರೀಕಾಂತ್ ಎಸ್. ಹೆಗ್ಡೆ, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಭೀಮಪ್ಪ ಹೆಚ್. ಬಿಲ್ಲಾರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ದೇವಳಕ್ಕೆ ಆಗಮಿಸುವ ಎಲ್ಲಾ ಮಾರ್ಗಗಳಲ್ಲಿ ಪೊಲೀಸರು ಬಂದೋವಸ್ತ್ ಮಾಡಿದ್ದರು. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಅವರ ಮಾರ್ಗದರ್ಶನದಲ್ಲಿ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಅವರು ಬೈಂದೂರು ಪಿಸ್ಐ ನಿರಂಜನ್ ಗೌಡ ಇತರೆ ಠಾಣೆಗಳ ಪಿಎಸ್ಐಗಳ ನೇತೃತ್ವದಲ್ಲಿ ಬಂದೋವಸ್ತ್ ಮಾಡಲಾಗಿತ್ತು.

Leave a Reply

Your email address will not be published. Required fields are marked *

20 + 3 =