ಉಪ್ಪುಂದದ ಕೊಡಿಹಬ್ಬ: ಮನ್ಮಹಾರಥೋತ್ಸವ ಸಂಪನ್ನ, ಜಾತ್ರಾ ಮಹೋತ್ಸವಕ್ಕೆ ಮಳೆ ಅಡ್ಡಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ – ಉಪ್ಪುಂದದ ಕೊಡಿಹಬ್ಬ ಶನಿವಾರ ಸಂಭ್ರಮ, ಸಡಗರದಿಂದ ಜರುಗಿತು.

Call us

Click Here

Click here

Click Here

Call us

Visit Now

Click here

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು.

ರಥೋತ್ಸವ ದಿನ ದೇವಳ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ. 

ಅಕಾಲಿಕ ಮಳೆಯ ಹಿನ್ನೆಲೆಯಲ್ಲಿ ಎಂದಿನಂತೆ ಜನಸಂದಣಿ ಇರಲಿಲ್ಲ. ಮಳೆಯಿಂದಾಗಿ ಜಾತ್ರೆಯ ಅಂಗಡಿಗಳು ವ್ಯವಹಾರವಿಲ್ಲದೇ ಕುಳಿತಿರುವುದು ಸಾಮಾನ್ಯವಾಗಿತ್ತು. ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿ, ಮಾಜಿ ಶಾಸಕ‌ರಾದ ಕೆ. ಗೋಪಾಲ ಪೂಜಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ದೇವಳಕ್ಕೆ ಆಗಮಿಸುವ ಎಲ್ಲಾ ಮಾರ್ಗಗಳಲ್ಲಿ ಪೊಲೀಸರು ಬಂದೋವಸ್ತ್ ಮಾಡಿದ್ದರು. ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಮಾರ್ಗದರ್ಶನದಲ್ಲಿ ಬೈಂದೂರು ಪಿಸ್ಐ ಪವನ್ ನಾಯಕ್, ಅನಿಲ್ ಬಿ.ಎಂ, ಕೊಲ್ಲೂರು ಠಾಣಾ ಪಿಎಸ್ಐ ನಾಸಿರ್ ಹುಸೇನ್ ನೇತೃತ್ವದಲ್ಲಿ ಬಂದೋವಸ್ತ್ ಮಾಡಲಾಗಿತ್ತು.

Call us

Leave a Reply

Your email address will not be published. Required fields are marked *

19 − 8 =