ಭಕ್ತಿಗೆ ಪ್ರಾಧಾನ್ಯತೆ ನೀಡಿದರೆ ಭಗವಂತನ ಸಾಕ್ಷಾತ್ಕಾರ: ರಾಜಗೋಪುರ ಉದ್ಘಾಟಿಸಿ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಚನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಮನುಷ್ಯ ಭಕ್ತಿಗೆ ಪ್ರಾಧಾನ್ಯತೆ ನೀಡಿದಾಗ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಎಲ್ಲ ಕಡೆಯೂ ದೇವರ ದೃಷ್ಟಿ ಸಿಸಿ ಕ್ಯಾಮಾರದಂತೆ ಇರುತ್ತದೆ. ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

Call us

Call us

ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಉದ್ಯಮಿ ಯು. ಬಿ. ಶೆಟ್ಟಿ ಅವರು ನಿರ್ಮಿಸಿಕೊಟ್ಟಿರುವ ನೂತನ ರಾಜಗೋಪುರವನ್ನು ಉದ್ಘಾಟಿಸಿ, ಆಶಿರ್ವಚನ ನೀಡಿ, ದೇವಸ್ಥಾನದಲ್ಲಿ ಸಾನಿಧ್ಯ ಮುಖ್ಯ. ನಿತ್ಯ ಪೂಜೆ, ಅನುಷ್ಟಾನದಿಂದ ಶಕ್ತಿ ಸಂಚಯನವಾಗುತ್ತದೆ. ಆ ಮೂಲಕ ಅನುಗ್ರಹಕಾರಕ ಶಕ್ತಿ ಉಂಟಾಗುತ್ತದೆ. ದೇವಸ್ಥಾನಗಳು ದೋಷ ನಿವಾರಣ ಕೇಂದ್ರಗಳು. ದೋಷವನ್ನು ಸ್ವೀಕರಿಸುವ ಶಕ್ತಿ ದೇವಸ್ಥಾನಗಳಿಗೆ ಇದ್ದಾಗ ಅನುಗ್ರಹವಾಗುತ್ತದೆ ಎಂದರು.

ಭಕ್ತರು ಶ್ರೀಮಂತರಾದಾಗ ದೇವಸ್ಥಾನಗಳು ಅಭಿವೃದ್ದಿ ಹೊಂದುತ್ತದೆ. ಅದಕ್ಕೆ ಸಾಕ್ಷಿಯಾಗಿ ಯು.ಬಿ ಶೆಟ್ಟರು ಭಕ್ತಿಯಿಂದ ದುರ್ಗಾಪರಮೇಶ್ವರಿಗೆ ರಾಜಗೋಪುರವನ್ನು ಸಮರ್ಪಿಸಿದ್ದಾರೆ ಎಂದರು

Call us

Call us

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ವಹಿಸಿ, ಯು.ಬಿ ಶೆಟ್ಟರ ಈ ಕೊಡುಗೆ ಶಾಶ್ವತವಾಗಿ ಉಳಿಯುತ್ತದೆ. ಈ ದೇವಸ್ಥಾನದ ಅಭಿವೃದ್ದಿಗೆ ಇನ್ನೂ ದಾನಿಗಳು ಮುಂದೆ ಬಂದಿದ್ದು, ಶೀಘ್ರ ದೇವಸ್ಥಾನಕ್ಕೆ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲಾಗುವುದು ಎಂದರು.

ಮಾಜಿ ಸಭಾಪತಿ, ವಿಧಾನಪರಿಷತ್ ಸದಸ್ಯರಾದ ಕೆ.ಪ್ರತಾಪಚಂದ್ರ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀ ಖಾರ್ವಿ, ದೇವಸ್ಥಾನದ ಆಡಳಿತಾಧಿಕಾರಿ ಶೋಭಾಲಕ್ಷ್ಮೀ ಎಚ್.ಎಸ್., ಯು.ಸೀತಾರಾಮ ಶೆಟ್ಟಿ, ರಂಜನಾ ಯು.ಬಿ. ಶೆಟ್ಟಿ ಉಪಸ್ಥಿತರಿದ್ದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಯುಬಿ ಶೆಟ್ಟಿ ದಂಪತಿಗಳು, ಮಕ್ಕಳು, ಅಳಿಯ ಗೌರವಿಸಿದರು. ಈ ಸಂದರ್ಭದಲ್ಲಿ ರಾಜ ಗೋಪುರ ಶಿಲ್ಪಿ ಶ್ರೀಧರ ಮೂರ್ತಿ ಶಿಕಾರಿಪುರ, ಪ್ರಧಾನ ಅರ್ಚಕರಾದ ಪ್ರಕಾಶ ಉಡುಪ ಅವರನ್ನು ಸನ್ಮಾನಿಸಲಾಯಿತು. ಗೋಪುರ ಕೊಡುಗೆಯ ದಾನಿಗಳಾದ ಯು.ಬಿ ಶೆಟ್ಟಿ, ರಂಜನಾ ಯು.ಬಿ ಶೆಟ್ಟಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಗಾಯಕಿ ನಂದಿನಿ ರಾವ್ ಗುಜರ್ ಪ್ರಾರ್ಥನೆ ಮಾಡಿದರು. ಶ್ರೀ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ ಉಪ್ಪುಂದದ ಸಹ ಮುಖ್ಯೋಪಾಧ್ಯಾಯಿನಿ ರಂಜಿತಾ ಹೆಗಡೆ ಸ್ವಾಗತಿಸಿದರು. ರಾಜಗೋಪುರ ನಿರ್ಮಾತ ಯು.ಬಿ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮದನ್ ಕುಮಾರ್ ಉಪ್ಪುಂದ ವಂದಿಸಿದರು. ಆರ್.ಜೆ ನಯನ ಮತ್ತು ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

twenty − twelve =