ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಪಬ್ಲಿಕ್ ಶಾಲೆ ಸತತ 9 ನೇ ಬಾರಿ ಸಿ.ಬಿ.ಎಸ್.ಇ. 10ನೇ ತರಗತಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 26 ವಿದ್ಯಾರ್ಥಿಗಳಲ್ಲಿ 24 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ, 42 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಉಳಿದ ಎಲ್ಲಾ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದು ಪಾಲಕರ ಮತ್ತು ಸಂಸ್ಥೆಯ ಪ್ರಶಂಸೆಗೆ ಪಾತ್ರರಾಗಿದ್ದು ಸುತ್ತಮುತ್ತಲಿನ ಪರಿಸರದಲ್ಲಿ ದಾಖಲೆಯ ಫಲಿತಾಂಶವಾಗಿರುತ್ತದೆ. ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ ಈ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.