ನಿರ್ದೇಶನ ಪಾಲಿಸದಿದ್ದಲ್ಲಿ ಕ್ರಿಮಿನಲ್ ಪ್ರಕರಣ: ಉಡುಪಿ ಜಿಲ್ಲಾಧಿಕಾರಿ ಆದೇಶ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೊರೋನಾ ಹರಡುವುದನ್ನು ತಡೆಯಲು ಈಗಾಗಲೇ ನಾಗರೀಕರ ಸಂಚಾರ ನಿರ್ಭಂದಿಸಿ ಸಿ.ಆರ್.ಪಿ.ಸಿ ಸೆಕ್ಷನ್ 144 (3) ರಲ್ಲಿ ಆದೇಶ ಹೊರಡಿಸಿದೆ ಅಲ್ಲದೇ ಇತರೇ ನಿರ್ದೇಶನಗಳನ್ನು ಹೊರಡಿಸಲಾಗಿದೆ.

Click Here

Call us

Call us

ಆದರೆ ಜಿಲ್ಲೆಯ ನಾಗರೀಕರು ಈ ಆದೇಶಗಳನ್ನು ಉಲ್ಲಂಘನೆ ಮಾಡುತ್ತಿರುವುದು ವರದಿಯಾಗುತ್ತಿದ್ದು, ಇಂತಹ ಪ್ರಕರಣಗಳನ್ನು ನಿಯಂತ್ರ್ರಿಸುವ ಅವಶ್ಯಕತೆಯಿರುವುದರಿಂದ, ಕಾನೂನು ಕ್ರಮ ಕೈಗೊಳ್ಳುವ ಅವಶ್ಯಕತೆಯಿದ್ದು, ಸಿ.ಆರ್.ಪಿ.ಸಿ ಆದೇಶ ಮತ್ತು ಕೋವಿಡ್ ರೋಗವನ್ನು ನಿಯಂತ್ರಿಸಲು ಹೊರಡಿಸಲಾಗಿರುವ ಇತರೇ ನಿರ್ದೇಶನಗಳನ್ನು ಪಾಲಿಸದೇ ಇದ್ದವರ ಮೇಲೆ, ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸುವ ಅಧಿಕಾರವನ್ನು, ಕುಂದಾಪುರ ಉಪವಿಭಾಗಾಧಿಕಾರಿಗಳು, ಉಡುಪಿ, ಕಾಪು, ಬ್ರಹ್ಮಾವರ, ಕುಂದಾಪುರ, ಕಾರ್ಕಳ, ಬೈಂದೂರು, ಹೆಬ್ರಿ ತಹಸೀಲ್ದಾರ್‌ಗಳಿಗೆ ಪ್ರತ್ಯಾಯೋಜಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

Click here

Click Here

Call us

Visit Now

ಜಿಲ್ಲೆಯಲ್ಲಿ ತರಕಾರಿ, ದಿನಸಿ, ಮೀನು, ಮಾಂಸ, ಹಣ್ಣು ಹಂಪಲು, ಮೆಡಿಕಲ್ ಶಾಪ್, ಹಾಲು ಮುಂತಾದವುಗಳನ್ನು ಮಾರಾಟ ಮಾಡುವ ಅಂಗಡಿ ಮಾಲೀಕರು ತಮ್ಮ ಅಂಗಡಿ ಎದುರಿನಲ್ಲಿ ಕನಿಷ್ಠ 6 ಅಡಿಗಳ ಅಂತರದಲ್ಲಿ ಕಡ್ಡಾಯವಾಗಿ ಪೇಂಟ್ ಅಥವಾ ಇನ್ನಿತರ ಬಣ್ಣದ ವಸ್ತುಗಳಿಂದ ಗುರುತನ್ನು ಹಾಕುವುದು ಮತ್ತು ಸಾರ್ವಜನಿಕರು/ಗ್ರಾಹಕರು ಅದೇ ಗುರುತು ಮಾಡಿದರು ಸ್ಥಳದಲ್ಲಿ ಸಾಲಾಗಿ ನಿಂತು ವಸ್ತುಗಳನ್ನು ಕೊಳ್ಳುವುದು ಕಡ್ಡಾಯ. ಈ ನಿರ್ದೇಶನಗಳನ್ನು ಪಾಲಿಸದ ಅಂಗಡಿ ಮಾಲೀಕರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದವರು ತಿಳಿಸಿದ್ದಾರೆ./ಕುಂದಾಪ್ರ ಡಾಟ್ ಕಾಂ ಸುದ್ದಿ./

Leave a Reply

Your email address will not be published. Required fields are marked *

16 − four =