ಬ್ರಹ್ಮಾವರ ಅಪಾರ್ಟ್‌ಮೆಂಟ್‌ನಲ್ಲಿ ಗಂಗೊಳ್ಳಿ ಮೂಲದ ಮಹಿಳೆ ಕೊಲೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬ್ರಹ್ಮಾವರದ ಉಪ್ಪಿನಕೋಟೆ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಗಂಗೊಳ್ಳಿ ಮೂಲದ ವಿಶಾಲ ಗಾಣಿಗ (35) ಕೊಲೆಯಾದ ಮಹಿಳೆ. ಕುತ್ತಿಗೆಗೆ ವಯರ್ ಬಿಗಿದು ಕೊಲೆ ಮಾಡಿರುವ ದುಷ್ಕರ್ಮಿಗಳು ಚಿನ್ನಾಭರಣ ದೋಚಿದ್ದಾರೆ.

Click here

Click Here

Call us

Call us

Visit Now

Call us

Call us

ಕೆಲವು ದಿನಗಳ ಹಿಂದೆಯಷ್ಟೆ ಪತಿಯೊಂದಿಗೆ ವಿದೇಶದಿಂದ ಆಗಮಿಸಿದ್ದ ಆಕೆ ಬ್ರಹ್ಮಾವರದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ತನ್ನ ತಂದೆ ಹಾಗೂ ಮಗಳ ಜೊತೆಗೆ ಸೋಮವಾರ ಗಂಗೊಳ್ಳಿಯ ಮನೆಗೆ ಹೋಗುವವರಿದ್ದರು. ದಾರಿಮಧ್ಯೆ, ಬ್ಯಾಂಕಿನ ಕೆಲಸ ಇರುವ ಕಾರಣ ಅದನ್ನು ಮುಗಿಸಿ ಗಂಗೊಳ್ಳಿ ಮನೆಗೆ ಬರುವುದಾಗಿ ಹೇಳಿ ಮರಳಿ ಬ್ರಹ್ಮಾವರಕ್ಕೆ ತೆರಳಿದ್ದರು. ಆದರೆ, ಸಂಜೆಯಾದರೂ ಮನೆಗೆ ಬಾರದ ಕಾರಣ ಮಗಳನ್ನು ಹುಡುಕಿ ಬ್ರಹ್ಮಾವರಕ್ಕೆ ತಂದೆ ಬಂದಿದ್ದು, ಆ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ.

ಮಧ್ಯಾಹ್ನ ಬ್ಯಾಂಕ್ ಕೆಲಸ ಮುಗಿಸಿ ಹಿಂದಿರುಗುವ ವೇಳೆ ಕೊಲೆಯಾಗಿರಬಹುದೆಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಎಸ್.ಪಿ. ವಿಷ್ಣುವರ್ಧನ್, ಎ.ಎಸ್.ಪಿ. ಕುಮಾರಚಂದ್ರ ಸಹಿತ ಪೊಲೀಸ್ ಅಧಿಕಾರಿಗಳು ತೆರಳಿ, ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ten − 5 =