ಪಂಚಾಯತ್ ಚುನಾವಣೆ: ಯಡ್ತರೆ ಕಾಂಗ್ರೆಸ್‌ಗೆ, ಬೈಂದೂರು ಬಿಜೆಪಿ ತೆಕ್ಕೆಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ನಡುವಿನ ಜಿದ್ದಾ ಜಿದ್ದಿನ ಕಣವಾಗಿದ್ದ ಯಡ್ತರೆ ಹಾಗೂ ಬೈಂದೂರು ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಯಡ್ತರೆ ಪಂಚಾಯತ್‌ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಬಹುಮತ ದೊರೆತಿದ್ದು ನಿರಾಯಸವಾಗಿ ಅಧಿಕಾರ ಹಿಡಿದರೆ, ಬೈಂದೂರು ಪಂಚಾಯತ್‌ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದು ಅಧಿಕಾರ ಹಿಡಿಯಲಿದ್ದಾರೆ.

ಯಡ್ತರೆ ಪಂಚಾಯತ್‌ನ ಯಡ್ತರೆ ಗ್ರಾ.ಪಂನ 8 ಕ್ಷೇತ್ರಗಳ ಒಟ್ಟು 25 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 19 ಸ್ಥಾನಗಳನ್ನು ಪಡೆದು ವಿಜಯದ ನಗೆ ಬೀರಿದ್ದರೆ, ಬಿಜೆಪಿ 5, ಹಾಗೂ ಓರ್ವ ಪಕ್ಷೇತ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಹಿಂದಿನ ಅವಧಿಯಲ್ಲಿಯೂ ಕಾಂಗ್ರೆಸ್ 19, ಬಿಜೆಪಿ 6 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಬೈಂದೂರು ಪಂಚಾಯತ್‌ನಲ್ಲಿ 21 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 17 ಸ್ಥಾನಗಳನ್ನು ಪಡೆದು ಗೆಲುವಿನ ನಗೆ ಬೀರಿದರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 4 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 11, ಬಿಜೆಪಿ 10 ಸ್ಥಾನಗಳನ್ನು ಪಡೆದುಕೊಂಡಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ.

ವಿಜಯೋತ್ಸವದಲ್ಲಿ ಯಡ್ತರೆ ಪಂಚಾಯತ್ ಉಸ್ತುವಾರಿ ವಹಿಸಿಕೊಂಡಿದ್ದ ಎಸ್. ರಾಜು ಪೂಜಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಸೇರಿದಂತೆ ವಿಜಯಿ ಅಭ್ಯರ್ಥಿಗಳು ಭಾಗವಹಿಸಿದ್ದರು.

► ಗಂಗೊಳ್ಳಿ ಪಂಚಾಯತ್ ಬಿಜೆಪಿ ತೆಕ್ಕೆಗೆ. ಕಾಂಗ್ರೆಸ್ 6, ಎಸ್‌ಡಿಪಿಐಗೆ 4 ಸ್ಥಾನ – https://kundapraa.com/?p=30732 .

Leave a Reply

Your email address will not be published. Required fields are marked *

18 + 12 =