ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಿಂದ ಪರಿಸರದ ಅಗತ್ಯವುಳ್ಳ ಕುಟುಂಬಗಳಿಗೆ ಬುಧವಾರ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಕಿಟ್‌ಗಳನ್ನು ವಿತರಿಸಿ ಮಾತನಾಡಿ, ಸಂಕಷ್ಟದ ಸಮಯದಲ್ಲಿ ಜನರಿಗೆ ನೆರವಾಗುವುದು ನಮ್ಮ ಕರ್ತವ್ಯವಾಗಿದ್ದು ಸುತ್ತಮುತ್ತಲಿನ ತೀರಾ ಅಗತ್ಯವುಳ್ಳವರನ್ನು ಗುರುತಿಸಿ ಅಕ್ಕಿ, ದಿನಸಿ ಸಾಮಾಗ್ರಿ, ತರಕಾರಿ ಹಾಗೂ ಆಯುರ್ವೇದ ಔಷಧವನ್ನೊಳಗೊಂಡ 70ಕ್ಕೂ ಹೆಚ್ಚು ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದರು.
ಎಳಜಿತ ಶ್ರೀ ರಾಮಕೃಷ್ಣ ಕುಟೀರದಿಂದ ಆಹಾರದ ಕಿಟ್ ವಿತರಣೆ
