ವೈ.ಎಸ್ ಹರಗಿ ಅವರ ‘ಉರಿವ ಜಲ’ ಕೃತಿಗೆ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್‌ಕಾರ‍್ಸ್ ಕಾಲೇಜು ಶಿಕ್ಷಣ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಡಾ. ಎಚ್. ಎಸ್. ಶಾಂತಾರಾಮ್ ಅವರ ಹೆಸರಿನಲ್ಲಿ ಕಳೆದ 5 ವರ್ಷಗಳಿಂದ ಕನ್ನಡದ ಅತ್ಯುತ್ತಮ ಕೃತಿಗೆ ನೀಡಲಾಗುತ್ತಿರುವ ಡಾ. ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಈ ಭಾರಿ ಲೇಖಕ ವೈ.ಎಸ್ ಹರಗಿ ಅವರ ’ಉರಿವ ಜಲ’ ಕಾದಂಬರಿಗೆ ದೊರೆತಿದೆ.

Call us

Call us

Call us

ಕನ್ನಡದ ವಿಮರ್ಶಕರಾದ ಡಾ.ಆಶಾದೇವಿ, ಬೆಂಗಳೂರು, ಡಾ.ರಾಜೇಂದ್ರ ಚೆನ್ನಿ, ಶಿವಮೊಗ್ಗ, ಡಾ.ಎಚ್.ಎಸ್. ರಾಘವೇಂದ್ರ ರಾವ್ ಬೆಂಗಳೂರು ಇವರು ಪ್ರಶಸ್ತಿ ಆಯ್ಕೆ ಸಮಿತಿಯ ನಿರ್ಣಾಯಕರಾಗಿದ್ದರು. ಪ್ರಶಸ್ತಿಯು ಹದಿನೈದು ಸಾವಿರ ರೂಪಾಯಿ ನಗದು ಮತ್ತು ಬೆಳ್ಳಿಯ ಪ್ರಶಸ್ತಿ ಫಲಕಗಳನ್ನೊಳಗೊಂಡಿದೆ. ಆಗಸ್ಟ್ ೧೩ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುವ ಸಾಹಿತ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಮಿತಿಯ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

one × two =